ಚಿಕ್ಕಮಗಳೂರಿನ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ನೈತಿಕ ಪೊಲೀಸ್ ಗಿರಿಗೆ ಯುವತಿ ಆತ್ಮಹತ್ಯೆ
BREAKING NEWS, Crime, Kannada News, Regional, Top News January 8, 2018ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧನ್ಯಶ್ರೀ ಸಾವಿಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನೈತಿಕ ಪೊಲೀಸ್ ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಮೂಡುಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಧನ್ಯಶ್ರೀಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ. ಇದರಿಂದ ಮನನೊಂದು ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ‘ಮುಸ್ಲಿಂ ಯುವಕನೊಂದಿಗೆ ಧನ್ಯಶ್ರೀ ಸುತ್ತಾಡುತ್ತಿರುವುದರಿಂದ […]