ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ

BREAKING NEWS, Kannada News, Regional No Comments on ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ 20

ಮೈಸೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಮಾನಸಗಂಗೋತ್ರಿಯಲ್ಲಿ ವಿದ್ಯಾರ್ಥಿಗಳು ಮೌನ ಪ್ರತಿಭಟನೆ ನಡೆಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಗಂಗೋತ್ರಿ ಗಡಿಯಾರ ಗೋಪುರದ ಬಳಿ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಇತ್ತೀಚೆಗೆ ಭಿನ್ನ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದೇ ಕಷ್ಟವಾಗಿದೆ. ಈ ರೀತಿಯಾಗಿ ವೈಚಾರಿಕ ಚಿಂತಕರು, ಪ್ರಗತಿಪರರೂ, ಪತ್ರಕರ್ತರನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಈ ಹತ್ಯೆಗಳನ್ನು ತಡೆಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆ ವೇಳೆ ಮೈಸೂರು ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಪವನ್ ಕುಮಾರ್, ಗೌರವಾಧ್ಯಕ್ಷರಾದ ಪ್ರಸಾದ್ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

Related Articles

Leave a comment

Back to Top

© 2015 - 2017. All Rights Reserved.