ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರಾಕರಿಸಿದ ಸುಪ್ರೀಂ ಕೋರ್ಟ್

Kannada News, National No Comments on ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರಾಕರಿಸಿದ ಸುಪ್ರೀಂ ಕೋರ್ಟ್ 20

ಮೈಸೂರು: ದೇಶದ 8 ರಾಜ್ಯಗಳಲ್ಲಿನ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಜನಸಂಖ್ಯೆ ಆಧರಿಸಿ ದೇಶದ ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಜಮ್ಮು-ಕಾಶ್ಮೀರ, ಅರುಣಾಚಲಪ್ರದೇಶ, ಮಣಿಪುರ, ಪಂಜಾಬ್‌ ಹಾಗೂ ಲಕ್ಷದ್ವೀಪ ರಾಜ್ಯಗಳಲ್ಲಿನ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಪರಿಗಣಿಸಿ ಅವರಿಗೆ ಕಾನೂನುಬದ್ಧ ಸೌಲಭ್ಯಗಳನ್ನು ನೀಡಬೇಕೆಂದು ದೆಹಲಿಯ ಬಿಜೆಪಿ ನಾಯಕ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಪಿಐಎಲ್‌ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ರಾಷ್ಟ್ರೀಯ ಆಯೋಗದ ಮೊರೆ ಹೋಗುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

Related Articles

Leave a comment

Back to Top

© 2015 - 2017. All Rights Reserved.