ಭಾರತಕ್ಕೆ ಗೆಲುವು: ಕುಲಭೂಷಣ್ ಜಾಧವ್ ಭೇಟಿ ಮಾಡಲು ಪತ್ನಿಗೆ ಅನುಮತಿ ನೀಡಲು ಮುಂದಾದ ಪಾಕಿಸ್ತಾನ

Kannada News, National No Comments on ಭಾರತಕ್ಕೆ ಗೆಲುವು: ಕುಲಭೂಷಣ್ ಜಾಧವ್ ಭೇಟಿ ಮಾಡಲು ಪತ್ನಿಗೆ ಅನುಮತಿ ನೀಡಲು ಮುಂದಾದ ಪಾಕಿಸ್ತಾನ 9

ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಮಾನವೀಯ ನೆಲೆಯಲ್ಲಿ ಭೇಟಿ ಮಾಡಲು ಅವರ ಪತ್ನಿಗೆ ಪಾಕಿಸ್ತಾನ ಅನುಮತಿ ನೀಡಲು ಮುಂದಾಗಿದೆ.

ಮಾನವೀಯ ನೆಲೆಯಲ್ಲಿ ಕುಲಭೂಷಣ್ ಜಾಧವ್ ಮತ್ತು ಅವರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಲು ಪಾಕ್ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಸ್ಲಾಮಾಬಾದ್‍ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ ಪಾಕ್ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಭಾರತ ಸರ್ಕಾರ ಈ ಹಿಂದೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕೆಂದು ಪಾಕ್ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಪಾಕಿಸ್ತಾನ ಭಾರತದ ಮನವಿಯನ್ನು ತಿರಸ್ಕರಿಸಿತ್ತು. ಮನವಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಭಾರತ ನೆದರ್ ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ನೀಡಿತ್ತು. ಭಾರತದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿತ್ತು.

Related Articles

Leave a comment

Back to Top

© 2015 - 2017. All Rights Reserved.