ಮೂರು ವರ್ಷದ ಬಳಿಕ ಕುಸ್ತಿ ಅಖಾಡಕ್ಕೆ ಸುಶೀಲ್ ಕುಮಾರ್

Kannada News, Sports No Comments on ಮೂರು ವರ್ಷದ ಬಳಿಕ ಕುಸ್ತಿ ಅಖಾಡಕ್ಕೆ ಸುಶೀಲ್ ಕುಮಾರ್ 22

ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಮೂರು ವರ್ಷದ ಬಳಿಕ ಕುಸ್ತಿ ಅಖಾಡಕ್ಕೆ ಮರಳುತ್ತಿದ್ದು, ಇದೇ ನ.15ರಿಂದ ಆರಂಭಗೊಳ್ಳಲಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್’ಶಿಪ್‌’ನಲ್ಲಿ ಸ್ಪರ್ಧಿಸುವುದಾಗಿ ಖಚಿತ ಪಡಿಸಿದ್ದಾರೆ.

2014ರ ಗ್ಲಾಸ್ಗೊ ಕಾಮನ್‌’ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಬಳಿಕ ಸುಶೀಲ್, ಸ್ಪರ್ಧಾ ಕಣದಿಂದ ದೂರ ಉಳಿದಿದ್ದರು. ಜಾರ್ಜಿಯಾದ ಟಿಬಿಲಿಸಿಯಲ್ಲಿ ತರಬೇತಿ ಪಡೆಯುತ್ತಿದ್ದ ಸುಶೀಲ್(74 ಕೆಜಿ), ಆಯ್ಕೆ ಟ್ರಯಲ್ಸ್‌ನಲ್ಲಿ ದಿನೇಶ್ ವಿರುದ್ಧ ಸೆಣಸಾಟ ನಡೆಸಿದ್ದರು.

Related Articles

Leave a comment

Back to Top

© 2015 - 2017. All Rights Reserved.