ಗಂಗೂಲಿ ದಾಖಲೆ ಮುರಿಯುವ ತವಕದಲ್ಲಿ ವಿರಾಟ್ ಕೊಹ್ಲಿ

Kannada News, Sports No Comments on ಗಂಗೂಲಿ ದಾಖಲೆ ಮುರಿಯುವ ತವಕದಲ್ಲಿ ವಿರಾಟ್ ಕೊಹ್ಲಿ 16

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 19 ಪಂದ್ಯಗಳಲ್ಲಿ ಗೆಲುವು ಪಡೆದು ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಭಾರತದ ಪರ ಟೆಸ್ಟ್ ನಲ್ಲಿ ಯಶಸ್ವಿ ನಾಯಕನೆಂಬ ಹೆಗ್ಗಳಿಕೆ ಧೋನಿ ಹೆಸರಲ್ಲಿದೆ. ಧೋನಿ ನೇತೃತ್ವದಲ್ಲಿ 60 ಪಂದ್ಯಗಳನ್ನು ಟೀಂ ಇಂಡಿಯಾ ಆಡಿದ್ದು 27 ರಲ್ಲಿ ಜಯಿಸಿದೆ. ನಂತರ ಸ್ಥಾನದಲ್ಲಿ ಗಂಗೂಲಿ ಇದ್ದು 49 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ 21 ರಲ್ಲಿ ಗೆಲುವು ಪಡೆದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ನಾಯಕ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. 104 ಪಂದ್ಯಗಳನ್ನು ಮುನ್ನಡೆಸಿದ ಸ್ಮಿತ್ 53ರಲ್ಲಿ ಗೆಲುವು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, 77 ಪಂದ್ಯಗಳಲ್ಲಿ 48ರಲ್ಲಿ ಗೆಲುವು ಪಡೆದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.