ರಾಜಕೀಯ ವೈಷಮ್ಯ ಜೆ.ಡಿ.ಎಸ್ ಶಾಸಕ ಚಲುವರಾಯಸ್ವಾಮಿ ಬೆಂಬಲಿಗನ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಜಖಂ

Crime, Kannada News, Regional, Top News No Comments on ರಾಜಕೀಯ ವೈಷಮ್ಯ ಜೆ.ಡಿ.ಎಸ್ ಶಾಸಕ ಚಲುವರಾಯಸ್ವಾಮಿ ಬೆಂಬಲಿಗನ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಜಖಂ 9

ಮಂಡ್ಯ: ರಾಜಕೀಯ ದ್ವೇಷ ಹಿನ್ನಲೆ ನಾಗಮಂಗಲ ತಾಲೂಕು ಪಂಚಾಯ್ತಿ ಅಧ್ಯಕ್ಷರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ, ಕಾರನ್ನು ಸಂಪೂರ್ಣ ಜಖಂಗೊಳಿಸಿದ್ದಾರೆ.

ಶಾಸಕ ಚಲುವರಾಯಸ್ವಾಮಿ ಬೆಂಬಲಿಗರಾದ ಅಧ್ಯಕ್ಷ ನವೀನ್, ನನ್ನ ಕಾರಿನ ಮೇಲೆ ಮಾಜಿ ಶಾಸಕ ಸುರೇಶ್ ಗೌಡ ಬೆಂಬಲಿಗರು ಕಲ್ಲು ಎತ್ತಿ ಹಾಕಿ ಕಾರನ್ನು ಜಖಂಗೊಳಿಸಿದ್ದಾರೆ ಎಂದು ಆರೋಪಿಸಿಲಾಗಿದೆ.

ನವೀನ್ ನಾಗಮಂಗಲದ ಬಿಜಿ ನಗರದಲ್ಲಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ತಮ್ಮ ಪತ್ನಿಯನ್ನು ಹೆರಿಗೆಗಾಗಿ ದಾಖಲಿಸಿದ್ದರು. ಆಸ್ಪತ್ರೆ ಬಳಿ ಕಾರು ನಿಲ್ಲಿಸಿ ಪತ್ನಿಗೆ ಊಟ ತರಲು ಹೊರಗೆ ತೆರಳಿದ್ದರು. ಕಾರಿನ ಬಳಿ ಯಾರೂ ಇಲ್ಲದೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ನವೀನ್ ಅವರ ಕಾರಿನ ಮೇಲೆ ಕಲ್ಲು ಎತ್ತಾಕಿ ಕಾರನ್ನು ಜಖಂಗೊಳಿಸಿದ್ದಾರೆ.

ನವೀನ್ ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ ಬೆಂಬಲಿಗರಾಗಿದ್ದು, ಸುರೇಶ್ ಗೌಡರ ವಿರುದ್ಧ ಸಭೆಯೊಂದರಲ್ಲಿ ಮಾತನಾಡಿದಕ್ಕೆ ಈ ರೀತಿ ಕೃತ್ಯವೆಸಗಿದ್ದಾರೆ ಎಂದು ಹೇಳುತ್ತಿದ್ದಾರೆ. ಅಲ್ಲದೆ ಸುರೇಶ್ ಗೌಡ ಬೆಂಬಲಿಗರಿಂದ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತಿದ್ದು, ಇಂದು ಕಾರನ್ನ ಜಖಂಗೊಳಿಸಿರೋದು ಅವರ ಬೆಂಬಲಿಗರೇ ಅಂತ ಗಂಭೀರ ಆರೋಪ ಮಾಡಿದ್ದಾರೆ. ಬೆಳ್ಳೂರು ಠಾಣಾ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.