ವೈದ್ಯರ ಮುಷ್ಕರಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಬಲಿ

Kannada News, Regional, Top News No Comments on ವೈದ್ಯರ ಮುಷ್ಕರಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಬಲಿ 14

ಮಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರದ ಹಿನ್ನಲೆ ಸೂಕ್ತ ಚಿಕಿತ್ಸೆ ದೊರೆಯದೆ ಪ್ರತಿಭಾವಂತ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಪೂಜಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಳು. ವಾರಕ್ಕೆರೆಡು ಬಾರಿ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಆಕೆಗೆ ಡಯಾಲಿಸಿಸ್ ನಡೆಯುತ್ತಿತ್ತು. ಮಂಗಳವಾರ ಪುತ್ತೂರು ಸಿಟಿ ಆಸ್ಪತ್ರೆಗೆ ಸೇರಿಸಿದಾಗ ರಕ್ತದಲ್ಲಿ ಸಮಸ್ಯೆ ಇದೆ ತಿಳಿಯಿತು. ವೈದ್ಯರು ಡಯಾಲಿಸಿಸ್ ಮಾಡಿಸುವಂತೆ ಸಲಹೆ ನೀಡಿದ್ದರು.

ಆದರೆ ಮಂಗಳೂರು ನೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಲಭ್ಯವಿರಲಿಲ್ಲ. ಗುರುವಾರ ರಾತ್ರಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಕೊನೆಯುಸಿರೆಳೆದಿದ್ದಾಳೆ.

Related Articles

Leave a comment

Back to Top

© 2015 - 2017. All Rights Reserved.