ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಸಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ: ಕೆ.ಎಸ್.ರಂಗಪ್ಪ

Kannada News, Regional, Top News No Comments on ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಸಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ: ಕೆ.ಎಸ್.ರಂಗಪ್ಪ 30

ಮೈಸೂರು: ನವೆಂಬರ್ 19 ರಂದು ಭಾನುವಾರ ಸಂಜೆ 4 ಗಂಟೆಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನಗರದ ಗೋಕುಲಂ ಮುಖ್ಯ ರಸ್ತೆಯಲ್ಲಿ ಚಾಮರಾಜ ಕ್ಷೇತ್ರದ ಜೆಡಿಎಸ್ ಕಚೇರಿಯನ್ನ ಉದ್ಘಾಟನೆ ಮಾಡಲಿದ್ದು, ಚಾಮರಾಜ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕರ್ನಾಟಕ ವಿಕಾಸ ವಾಹಿನಿ ಕುಮಾರ್ ಪರ್ವ ಬಸ್ ಸಂಚರಿಸಲಿದೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್ ರಂಗಪ್ಪ ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ನಂತರ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮುಂದಿನ ಜೆಡಿಎಸ್ ಚಾಮರಾಜ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ನಿವೃತ್ತ ಕುಲಪತಿ ಕೆ.ಎಸ್.ರಂಗಪ್ಪ, ಪತ್ರಕರ್ತರ ಪ್ರಶ್ನೆಗಳಿಗೆ ಜಾಣ್ಮೆಯಿಂದಲೇ ಉತ್ತರಿಸಿದರು. ಶೇ. 60 ರಿಂದ 70 ರಷ್ಟು ವಿದ್ಯಾವಂತರಿರುವ ಚಾಮರಾಜ ಕ್ಷೇತ್ರದಲ್ಲಿ ಮೈಸೂರಿನ 2 ವಿವಿಗಳಿಗೂ ಕುಲಪತಿಯಾಗಿದ್ದಾಗ ಸಾಕಷ್ಟು ವಿದ್ಯಾರ್ಥಿಗಳ ಪರವಾಗಿ ಹಾಗೂ ಅಭಿವೃದ್ಧಿ ಕೆಲಸ ಮಾಡಿದ್ದೇನೆ. 3 ಲಕ್ಷ ವಿದ್ಯಾರ್ಥಿಗಳು ಈಗಲೂ ನನ್ನ ಫೋಟೋ ಇಟ್ಟುಕೊಂಡಿದ್ದಾರೆ. ಶೇ. 30 ರಷ್ಟು ಬಡವರು ಈ ಕ್ಷೇತ್ರದಲ್ಲಿದ್ದಾರೆ. ನಾನು ಸಹ ಬಡತನದಿಂದ ಬಂದವನಾದ್ದರಿಂದ ಬಡವರಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನ ಮುಖ್ಯಮಂತ್ರಿ ಮಾಡಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಗುಂಪುಗಾರಿಕೆ ಮಾಡಬಾರದು. ಈ ಬಾರಿ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್‌ಗೆ ಅವಕಾಶವಿರುವುದಿಲ್ಲ. ಈ ವಿಚಾರದಲ್ಲಿ ವರಿಷ್ಠರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಸಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ. ಕರ್ನಾಟಕದ ಇತಿಹಾಸ ಬದಲಾಗಬೇಕಾದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದರು. 

ಇನ್ನು ಕಾರ್ಯಕ್ರಮದಲ್ಲಿ ಜೆಡಿಎಸ್ ನಗರಾಧ್ಯಕ್ಷ ಕೆ.ಹರೀಶ್ ಗೌಡ ಅವರು ಹಾಜರಿರಲಿಲ್ಲ. ಕೆ.ಎಸ್ ರಂಗಪ್ಪ ಅವರು ಪಕ್ಷಕ್ಕೆ ಸೇರಿಕೊಂಡ ನಂತರ ರಂಗಪ್ಪ ಅವರು ಭಾಗವಹಿಸುವ ಯಾವುದೇ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳುತ್ತಿಲ್ಲ. ಈ ಹಿಂದೆ ರಂಗಪ್ಪ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೂ ಹರೀಶ್ ಗೌಡ ಗೈರಾಗುವ ಮೂಲಕ ತನಗೆ ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದರು. ಈ ಮಧ್ಯೆ ಸಮಾಜಿಕ ಜಾಲತಾಣಗಳಲ್ಲಿ ಮುಂದಿನ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಕೆ.ಹರೀಶ್ ಗೌಡ ಪ್ರಚಾರ ಮಾಡುತ್ತಿದ್ದು, ಜೆಡಿಎಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

Related Articles

Leave a comment

Back to Top

© 2015 - 2017. All Rights Reserved.