ಜಿಲ್ಲಾಧಿಕಾರಿ ಡಿ. ರಂದೀಪ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Kannada News, Regional, Top News No Comments on ಜಿಲ್ಲಾಧಿಕಾರಿ ಡಿ. ರಂದೀಪ್ ವಿರುದ್ಧ ಲೋಕಾಯುಕ್ತಕ್ಕೆ ದೂರು 24

ಮೈಸೂರು: ಜಿಲ್ಲಾಧಿಕಾರಿಗಳಾದ ಡಿ.ರಂದೀಪ್ ಅವರ ವಿರುದ್ಧ ಸಾಹಿತಿಗಳು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿ ಡಿ.ರಂದೀಪ್ ಕರ್ತವ್ಯಲೋಪವೆಸಗಿದ್ದಾರೆಂದು ಆರೋಪಿಸಿ ಸಾಹಿತಿಗಳು, ಕನ್ನಡ ಹೋರಾಟಗಾರರು ದೂರು ದಾಖಲಿಸಿದ್ದಾರೆ.

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಗೋಲ್‌ಮಾಲ್ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಮೂವರ ವಿರುದ್ಧ ದೂರು ದಾಖಲಿಸಿದ್ದೇವೆ, ಹಗರಣದ ಬಗ್ಗೆ ತಿಳಿದಿದ್ದರೂ ಡಿಸಿ ರಂದೀಪ್ ಸುಮ್ಮನಿದ್ದಾರೆ. ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಸಾಹಿತಿಗಳನ್ನ ದೂರವಿಟ್ಟು ಮಾಡುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಬನ್ನೂರು ಕೆ.ರಾಜು ಆರೋಪಿಸಿದರು. ಡಿಸಿ ಜೊತೆಗೆ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ ವಿರುದ್ಧವೂ ದೂರು ದಾಖಲಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.