ಭಾರತ-ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ ಬದಲು; ಹೀಗಿರಲಿದೆ ಹೊಸ ವೇಳಾಪಟ್ಟಿ

Kannada News, Sports, Top News No Comments on ಭಾರತ-ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ ಬದಲು; ಹೀಗಿರಲಿದೆ ಹೊಸ ವೇಳಾಪಟ್ಟಿ 13

ಮುಂಬೈ:  ಭಾರತ-ಶ್ರೀಲಂಕಾ ನಡುವಿನ ಮೊದಲೆರಡು ಏಕದಿನ ಪಂದ್ಯಗಳ ವೇಳಾಪಟ್ಟಿಯಲ್ಲಿ ಅಲ್ಪಬದಲಾವಣೆಯನ್ನು ಮಾಡಲಾಗಿದೆ.

ಧರ್ಮಶಾಲಾ ಹಾಗೂ ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯಗಳು ಹಗಲು ರಾತ್ರಿಯ ಪಂದ್ಯಗಳಾಗಿರುವುದರಿಂದ ಎರಡು ಗಂಟೆ ಮುಂಚಿತವಾಗಿ ಜರುಗಲಿವೆ ಎಂದು ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ ಕಾಮೆಂಟ್ರಿ ಹೇಳುವಾಗ ತಿಳಿಸಿದ್ದಾರೆ.

ಮಧ್ಯಾಹ್ನ 1.30ರಿಂದ ಆರಂಭವಾಗಬೇಕಿದ್ದ ಪಂದ್ಯಗಳು ಬೆಳಗ್ಗೆ 11.30ಕ್ಕೆ ಆರಂಭವಾಗುವ ಸಾಧ್ಯತೆಯಿದೆ. ಡಿಸೆಂಬರ್ ವೇಳೆ ಉತ್ತರಭಾರತದಲ್ಲಿ ಸಾಕಷ್ಟು ಚಳಿ ಇರುವುದರಿಂದ ಆಟಗಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಸಿಸಿಐ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗುತ್ತಿದೆ. ಬಿಸಿಸಿಐನ ಈ ಸಮಯೋಚಿತ ನಿರ್ಧಾರ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

Related Articles

Leave a comment

Back to Top

© 2015 - 2017. All Rights Reserved.