34 ವರ್ಷದ ಬಳಿಕ ಟೀಂ ಇಂಡಿಯಾದ ವೇಗದ ಬೌಲರ್ ಗಳಿಂದ ವಿಶೇಷ ಸಾಧನೆ..!

Kannada News, Sports No Comments on 34 ವರ್ಷದ ಬಳಿಕ ಟೀಂ ಇಂಡಿಯಾದ ವೇಗದ ಬೌಲರ್ ಗಳಿಂದ ವಿಶೇಷ ಸಾಧನೆ..! 30

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಗಳು 34 ವರ್ಷದ ಬಳಿಕ ಸಾಧನೆಯೊಂದನ್ನು ಮಾಡಿದ್ದಾರೆ.

ಇನ್ನಿಂಗ್ಸ್ ಒಂದರಲ್ಲಿ ಎಲ್ಲ 10 ವಿಕೆಟ್ ಗಳನ್ನು ಪಡೆಯುವ ಮೂಲಕ ಈ ವಿಶೇಷ ಸಾಧನೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ತಲಾ 4 ವಿಕೆಟ್ ಕಿತ್ತರೆ, ಉಮೇಶ್ ಯಾದವ್ ತಲಾ 2 ವಿಕೆಟ್ ಕಿತ್ತು ಈ ವಿಶೇಷ ಸಾಧನೆಯನ್ನು ನಿರ್ಮಿಸಿದ್ದಾರೆ.

ಈ ಹಿಂದೆ 1981ರಲ್ಲಿ ಇಂಗ್ಲೆಂಡ್ ವಿರುದ್ಧ ಮುಂಬೈನಲ್ಲಿ ನಡೆದ ಟೆಸ್ಟ್ ನಲ್ಲಿ ವೇಗದ ಬೌಲರ್ ಎಲ್ಲ 10 ವಿಕೆಟ್ ಕಿತ್ತಿದ್ದರೆ ಬಳಿಕ 1983ರಲ್ಲಿ ಅಹಮದಾಬಾದ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಲ್ಲಿ ಮತ್ತೊಮ್ಮೆ ಈ ಸಾಧನೆಯನ್ನು ಮಾಡಿದ್ದರು.

Related Articles

Leave a comment

Back to Top

© 2015 - 2017. All Rights Reserved.