9 ವರ್ಷಗಳಿಂದ ಕೋಮಾವಸ್ಥೆಯಲ್ಲಿದ್ದ ಕಾಂಗ್ರೆಸ್‌ ಮುಖಂಡ ನಿಧನ

Kannada News, National No Comments on 9 ವರ್ಷಗಳಿಂದ ಕೋಮಾವಸ್ಥೆಯಲ್ಲಿದ್ದ ಕಾಂಗ್ರೆಸ್‌ ಮುಖಂಡ ನಿಧನ 13

ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಪ್ರಿಯರಂಜನ್‌ ದಾಸ್ ಮುನ್ಷಿ (72) ಸೋಮವಾರ ನಿಧನರಾದರು. 2008ರಿಂದ ಪ್ರಿಯರಂಜನ್‌ ದಾಸ್‌ ಮುನ್ಷಿ ಕೋಮಾವಸ್ಥೆಯಲ್ಲಿದ್ದರು. 2008ರಲ್ಲಿ ಪ್ರಿಯರಂಜನ್‌ ದಾಸ್‌ ಮುನ್ಷಿ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಕೋಮಾಕ್ಕೆ ಜಾರಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ಸಂಸ್ಥೆ ವೈದ್ಯರು ತಿಳಿಸಿದ್ದರು. ಆ ನಂತರ ಅವರನ್ನು ಬೇರೆ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಕಳೆದ ಕೆಲವು ದಿನಗಳಿಂದ ಮುನ್ಷಿ ಆರೋಗ್ಯದಲ್ಲಿ ಏರು ಪೇರಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಸೋಮವಾರ ಮುನ್ಷಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.