ಜಿಂಬಾಬ್ವೆ ಅಧ್ಯಕ್ಷ ಸ್ಥಾನಕ್ಕೆ ರಾಬರ್ಟ್‌ ಮುಗಾಬೆ ರಾಜೀನಾಮೆ

International, Kannada News No Comments on ಜಿಂಬಾಬ್ವೆ ಅಧ್ಯಕ್ಷ ಸ್ಥಾನಕ್ಕೆ ರಾಬರ್ಟ್‌ ಮುಗಾಬೆ ರಾಜೀನಾಮೆ 15

ಹರಾರೆ: ಜಿಂಬಾಬ್ವೆ ಅಧ್ಯಕ್ಷ ರಾಬರ್ಟ್‌ ಮುಗಾಬೆ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಂಬಾಬ್ವೆಯ ಸಂವಿಧಾನದ 96ನೇ ಕಲಂಗೆ ಅನು ಗುಣವಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಮುಗಾಬೆ ಅವರು ಪತ್ರದಲ್ಲಿ ತಿಳಿಸಿರುವುದಾಗಿ ಸ್ಪೀಕರ್ ಜೇಕಬ್‌ ಹೇಳಿದ್ದಾರೆ.

ಈತ್ತೀಚೆಗೆ ದಿಢೀರ್‌ ಬೆಳವಣಿಗೆಯಲ್ಲಿ ಜಿಂಬಾಬ್ವೆ ಆಡಳಿತವನ್ನು ಸೇನೆ ವಶಕ್ಕೆ ತೆಗೆದುಕೊಂಡು ಮುಗಾಬೆ ರಾಜೀನಾಮೆಗೆ ಒತ್ತಾಯಿಸಿತ್ತು. ಮುಗಾಬೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಅದನ್ನು ಅವರ ಪತ್ನಿ ಹಾಗೂ ಸಂಬಂಧಿಕರು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೇಶಾದ್ಯಂತ ಪ್ರತಿಭಟನೆಗಳು ನಡೆದಿತ್ತು. ಹಾಗೆಯೇ ಪಕ್ಷದ ನಾಯಕರೂ ಸೇರಿದಂತೆ ವಿರೋಧ ಪಕ್ಷದರವರು ಸಹ ಮುಗಾಬೆ ಅವರ ರಾಜೀನಾಮೆಗೆ ಆಗ್ರಹಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.