ಗೋಡ್ಸೆ ಮೂರ್ತಿ ತೆಗೆದುಹಾಕುವಂತೆ ಗ್ವಾಲಿಯರ್ ಜಿಲ್ಲಾಧಿಕಾರಿ ಆದೇಶ

Kannada News, National No Comments on ಗೋಡ್ಸೆ ಮೂರ್ತಿ ತೆಗೆದುಹಾಕುವಂತೆ ಗ್ವಾಲಿಯರ್ ಜಿಲ್ಲಾಧಿಕಾರಿ ಆದೇಶ 20

ಗ್ವಾಲಿಯರ್: ಅಖಿಲ ಭಾರತೀಯ ಹಿಂದೂ ಮಹಾಸಭಾ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ನಾಥೂರಾಮ್ ಗೋಡ್ಸೆ ಮೂರ್ತಿಯನ್ನು ತೆಗೆದು ಹಾಕುವಂತೆ ಗ್ವಾಲಿಯರ್ ನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಗೋಡ್ಸೆ ಮೂರ್ತಿ ಸ್ಥಾಪನೆಗೆ ರಾಜ್ಯದ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್ ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮೂರ್ತಿಯನ್ನು ತೆರವುಗೊಳಿಸುವಂತೆ ಡಿಸಿ ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದನ್ವಯ ಸ್ಥಳೀಯ ಪೊಲೀಸರು ಗೋಡ್ಸೆ ಮೂರ್ತಿಯನ್ನು ವಶಕ್ಕೆ ಪಡೆದುಕೊಂಡು, ಕೋಣೆಯನ್ನು ಸೀಜ್ ಮಾಡಿದ್ದಾರೆ. ಇದಕ್ಕೆ ಬಲ ಪಂಥೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.