ಹುಡುಗಿ ವಿಚಾರಕ್ಕೆ ಬಿಯರ್ ಬಾಟಲಿ ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿಗಳು

Kannada News, Regional, Top News No Comments on ಹುಡುಗಿ ವಿಚಾರಕ್ಕೆ ಬಿಯರ್ ಬಾಟಲಿ ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿಗಳು 25

ಹಾಸನ: ಹಾಸನದಲ್ಲಿ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಗುಂಪೊಂದು ಹೊಡೆದಾಡಿಕೊಂಡಿದೆ.

ಅರಕಲಗೂಡು ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಕಾಲೇಜು ಮುಗಿದ ಬಳಿಕ ಯುವಕರು ಪಟ್ಟಣದ ಬಸ್ ನಿಲ್ದಾಣದಲ್ಲಿ ತಗಾದೆ ತೆಗೆದುಕೊಂಡು ಬಡಿದಾಡಿಕೊಂಡಿದ್ದಾರೆ. ಯುವಕರು ಅಲ್ಲೇ ಪಕ್ಕದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯನ್ನು ತೆಗೆದುಕೊಂಡು ಪರಸ್ಪರ ಬಡಿದಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಹೆಚ್ಚಿನ ಅನಾಹುತ ಸಂಭವಿಸಬಾರದೆಂದು ಸಾರ್ವಜನಿಕರೇ ಮಧ್ಯಪ್ರವೇಶಿಸಿ ಯುವಕರನ್ನು ಹೊಡೆದಾಡದಂತೆ ತಡೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.