ಸಿ.ಎಂ ತವರಿನಲ್ಲಿ 2 ಸಮುದಾಯದ ಗುಂಪಿನ ನಡುವೆ ಘರ್ಷಣೆ

BREAKING NEWS, Crime, Kannada News, Regional, Top News No Comments on ಸಿ.ಎಂ ತವರಿನಲ್ಲಿ 2 ಸಮುದಾಯದ ಗುಂಪಿನ ನಡುವೆ ಘರ್ಷಣೆ 23

ಮೈಸೂರು: ನಿನ್ನೆ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯದ ಗುಂಪುಗಳ ನಡುವೆ ಘರ್ಷಣೆಯಾಗಿ ಹಲವು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಮಹಳ್ಳಿ ಈ ಘಟನೆ ನಡೆದಿದೆ. ಮನೆಯ ಮುಂಭಾಗದಲ್ಲಿ ನಿಂತಿದ್ದ ಕಾರುಗಳು ಮತ್ತು ದ್ವಿಚಕ್ರ ವಾಹನಗಳನ್ನು ಜಖಂ ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ ಡಿವೈಎಸ್‍ಪಿ ಮಹಮ್ಮದ್ ಸುಜಿತಾ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಇನ್ನು ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಪೊಲೀಸರು ಬಲವಂತವಾಗಿ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಗಾಯಾಳುಗಳ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆದಿದೆ.

Related Articles

Leave a comment

Back to Top

© 2015 - 2017. All Rights Reserved.