ಹೈದರಾಬಾದ್’ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್ ಪುತ್ರಿ

Kannada News, National No Comments on ಹೈದರಾಬಾದ್’ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್ ಪುತ್ರಿ 13

ಹೈದರಾಬಾದ್: ಇಂದಿನಿಂದ ಆರಂಭವಾಗಲಿರುವ ವಾರ್ಷಿಕ ಜಾಗತಿಕ ಉದ್ಯಮ ಮೇಳದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಹಾಗೂ ಹಿರಿಯ ಸಲಹೆಗಾರ್ತಿ ಇವಾಂಕಾ ಭಾರತಕ್ಕೆ ಆಗಮಿಸಿದ್ದಾರೆ.

ಹೈದರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇವಾಂಕಾ ರನ್ನು ಭಾರತದ ಹಿರಿಯ ಅಧಿಕಾರಿಗಳು ಹಾಗೂ ಭದ್ರತಾ ಅಧಿಕಾರಿಗಳು ಸ್ವಾಗತಿಸಿದರು. ಇಂದಿನಿಂದ ನವೆಂಬರ್ 30ರವರೆಗೂ ನಡೆಯಲಿರುವ ಜಾಗತಿಕ ಉದ್ಯಮ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇವಾಂಕಾ ಟ್ರಂಪ್ ಪಾಲ್ಗೊಳ್ಳುತ್ತಿದ್ದು, ಭಾರತ ಮಾತ್ರ ವಲ್ಲದೇ ದಕ್ಷಿಣ ಏಷ್ಯಾದ ವಿವಿಧ ದೇಶಗಳ ಖ್ಯಾತನಾಮ ಉದ್ಯಮಿಗಳೂ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಂದೆ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಜಾಗತಿಕ ವೇದಿಕೆಯಲ್ಲಿ ಇವಾಂಕಾ ಮೊದಲ ಬಾರಿಗೆ ಕಾಣಿಸಿ ಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಅವರೊಂದಿಗೆ ಉದ್ಯಮ ಮೇಳದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಸೇರಿದಂತೆ ಅವರ ಸಂಪುಟದ ಪ್ರಮುಖ ಮಂತ್ರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಬಳಿಕ ಇವಾಂಕಾ, ತಾಜ್ ಫಲಕ್ನಾಮಾ ಅರಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆತಿಥ್ಯದ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಗುರಿ ಹೊಂದಿದ್ದಾರೆ. ಪ್ರಮುಖ ಕಂಪನಿಗಳ ಸಿಇಒಗಳು ಸೇರಿದಂತೆ ಸುಮಾರು 1500 ಮಂದಿ ಈ ಪ್ರತಿಷ್ಠಿತ ಮೇಳದಲ್ಲಿ ಭಾಗವಹಿಸಲಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.