ಡೆತ್ ನೋಟ್ ಬರೆದಿಟ್ಟು ಸಿ.ಎಂ ಆಪ್ತನ ಮಗಳು ಆತ್ಮಹತ್ಯೆ

BREAKING NEWS, Crime, Regional, Top News No Comments on ಡೆತ್ ನೋಟ್ ಬರೆದಿಟ್ಟು ಸಿ.ಎಂ ಆಪ್ತನ ಮಗಳು ಆತ್ಮಹತ್ಯೆ 25

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ, ಕಾರ್ಪೋರೇಟರ್ ನಾಗಭೂಷಣ್ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೈಸೂರು ಕಾರ್ಪೋರೇಟರ್ ನಾಗಭೂಷಣ್ ಪುತ್ರಿ ವನಿತಾ ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ. ಆರು ತಿಂಗಳ ಹಿಂದೆಯಷ್ಟೇ ತಮಿಳುನಾಡು ಮೂಲದ ಟೆಕ್ಕಿ ವಸಂತ್ ಎಂಬವರ ಜೊತೆ ಮದ್ವೆಯಾಗಿದ್ದರು. ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್ 25ನೇ ಕ್ರಾಸ್‍ನ ತನ್ನ ಗಂಡನ ಮನೆಯಲ್ಲಿ ವಾಸವಾಗಿದ್ದರು. ಆದರೆ ಗಂಡನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವನಿತಾ ಮತ್ತು ವಸಂತ್ ದಂಪತಿ ಅನ್ಯೋನ್ಯವಾಗಿದ್ದರು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮೃತ ವನಿತಾ ಸಾಯುವ ಮುಂಚೆ 4 ಪುಟದ ಡೆತ್‍ನೋಟ್ ಬರೆದಿದ್ದಾರೆ. ನನ್ನ ಅತ್ತೆ ಗಾಯತ್ರಿ ಪ್ರತಿನಿತ್ಯ ಮನೆಯಲ್ಲಿ ಕಿರುಕುಳ ನೀಡುತಿದ್ದಾರೆ. ಅಪ್ಪನ ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಅಷ್ಟೇ ಅಲ್ಲದೇ ಸರಿಯಾಗಿ ಊಟ ತಿಂಡಿಯನ್ನು ಸಹ ನೀಡದೆ ಹಿಂಸೆ ನೀಡುತ್ತಿದ್ದಾರೆ. ಇದರಿಂದ ನಾನು ಬೇಸತ್ತು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವನಿತಾ ಡೆತ್ ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಹೆಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.