ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಮೂವರ ಸಾವು

Crime, Kannada News, Regional, Top News No Comments on ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಮೂವರ ಸಾವು 19

ಹಾಸನ: ಇಂದು ಮುಂಜಾನೆ ನಗರದ ಆಲೂರು ತಾಲೂಕಿನ ಹದ್ದುರ್ಗ ಬಳಿ ಕೆಎಸ್’ಆರ್’ಟಿಸಿ ವೋಲ್ವೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಫಾತೀಮಾ(27), ಅಬ್ದುಲ್ ಸಲಾಂ(54) ಸೇರಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.
ಘಟನೆ ಸ್ಥಳಕ್ಕೆ ಆಲೂರು, ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.