ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹತ್ಯೆ

BREAKING NEWS, Kannada News, National, Top News No Comments on ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹತ್ಯೆ 10

ಶ್ರೀನಗರ: ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಲ್ಲಸೆ ಎನ್ ಕೌಂಟರ್ ನಿಂದ ತಪ್ಪಿಸಿಕೊಂಡಿದ್ದ ಮತ್ತೋರ್ವ ಉಗ್ರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಿ.04 ರಂದು ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು ಸೇನಾ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಿದ್ದಾರೆ ಈ ವೇಳೆ ಎನ್ ಕೌಂಟರ್ ಪ್ರಾರಂಭವಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ.  ಡಿ.5 ರಂದು ಮಧ್ಯರಾತ್ರಿ 2 ಗಂಟೆಗೆ ಎನ್ ಕೌಂಟರ್ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು ಮೂವರು ಉಗ್ರರರನ್ನು ಹತ್ಯೆ ಮಾಡಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.