ಬಾಬ್ರಿ ಮಸೀದಿ ಧ್ವಂಸಕ್ಕೆ 25ನೇ ವರ್ಷ: ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ

Kannada News, National, Top News No Comments on ಬಾಬ್ರಿ ಮಸೀದಿ ಧ್ವಂಸಕ್ಕೆ 25ನೇ ವರ್ಷ: ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ 17

ನವದೆಹಲಿ: ಬಾಬ್ರಿ ಮಸೀದಿ ಧ್ವಂಸಕ್ಕೆ ಇಂದು 25ನೇ ವರ್ಷಾ ಸಂದ ಹಿನ್ನಲೆಯಲ್ಲಿ ರಾಷ್ಟ್ರದಲ್ಲಿ ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಭದ್ರತಾ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಎಲ್ಲಾ ರಾಜ್ಯಗಳು ಜಾಗರೂಕರಾಗಿದ್ದು, ಶಾಂತಿ ಕಾಪಾಡಲು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ದೇಶದಲ್ಲಿ ಎಲ್ಲಿಯೂ ಕೋಮು ಗಲಭೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.

ಈ ಸಂಬಂಧ ರಾಜ್ಯಗಳೊಂದಿಗೆ ಮಾತನಾಡಿರುವ ಕೇಂದ್ರ ಗೃಹ ಸಚಿವಾಲಯ, ಸೂಕ್ಷ್ಮ ಪ್ರದೇಶಗಳಲ್ಲಿ ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲು ಹಾಗೂ ಹೆಚ್ಚುವರಿ ಜಾಗೃತಿ ವಹಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಇದರಿಂದ ಶಾಂತಿ ಕದಡಲು ಮಾಡುವ ಯಾವುದೇ ಬಗೆಯ ಯತ್ನವನ್ನು ತಡೆಯಬಹುದು ಎಂದು ಹೇಳಿರುವುದಾಗಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 1992ರ ಡಿ.6ರಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಭದ್ರತಾ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧಾಜ್ಞೆ

25 ವರ್ಷವಾಗುವ ಹಿನ್ನಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧಾಜ್ಞೆ ಜಾರಿಗೊಳಿಸಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಜಂಟಿ ಆದೇಶ ಹೊರಡಿಸಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ನಿರ್ಬಂಧಕಾಜ್ಞೆ ಜಾರಿಯಿರಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ನಿರ್ಬಂಧಕಾಜ್ಞೆ ಹೇರಿದ್ದು ನಾಳೆ ಬಹಿರಂಗ ಸಭೆ, ಪ್ರತಿಭಟನೆ, ರ್ಯಾಲಿಗೆ ನಿಷೇಧ ಹೇರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಕಮೀಷನರ್ ಟಿ ಆರ್ ಸುರೇಶ್ ಹೇಳಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.