ನಂತೂರಿನಲ್ಲಿ ಖಾಸಗಿ ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಸಾವು, 21 ಮಂದಿಗೆ ಗಾಯ

Crime, Kannada News, Regional No Comments on ನಂತೂರಿನಲ್ಲಿ ಖಾಸಗಿ ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಸಾವು, 21 ಮಂದಿಗೆ ಗಾಯ 17

ಮಂಗಳೂರು: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟ ಘಟನೆ ನಗರದ ನಂತೂರು ಸಮೀಪ ನಡೆದಿದೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ 21ಕ್ಕಿಂತಲೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಮಂಗಳೂರಿನಿಂದ ಮಳಲಿಗೆ ಪಯಣ ಬೆಳೆಸುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.