ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್.ಐ.ಆರ್ ದಾಖಲು

BREAKING NEWS, Crime, Kannada News, Regional, Top News No Comments on ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್.ಐ.ಆರ್ ದಾಖಲು 45

ಮೈಸೂರು: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು ಸಿ.ಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಹೆಗಡೆ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. (ಅಧಿಕಾರದ ಆಸೆಗಾಗಿ ಯಾರ ಬೂಟು ಬೇಕಿದ್ರೂ ನೆಕ್ಕುತ್ತಾರೆ)  ಹೀಗೆ ಉದ್ದೇಶಪೂರ್ವಕವಾಗಿಯೇ ಅವಮಾನ ಮಾಡಿದ್ದಾರೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ಎಂಬುವರು ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರು ಸ್ವೀಕರಿಸಿದ ನ್ಯಾಯಾಲಯವು ಕೇಂದ್ರ ಸಚಿವರ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿ ಮೈಸೂರಿನ ದೇವರಾಜ ಠಾಣೆಗೆ ಪ್ರಕರಣ ವರ್ಗಾಯಿಸಿದೆ. ಈ ಪ್ರಕರಣವು ಬೆಳಗಾವಿಯ ಕಿತ್ತೂರಿನಲ್ಲಿ ನಡೆದಿರುವುದರಿಂದ ದೂರನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.