ಟೆಸ್ಟ್ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

Kannada News, Sports No Comments on ಟೆಸ್ಟ್ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ 4

ದುಬೈ: ಶ್ರೀಲಂಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅಮೋಘ ದ್ವಿಶತಕ ಬಾರಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಅವರು ಗುರುವಾರ  ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಐದನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈಗ ಮೂರು ಸ್ಥಾನಗಳ ಬಡ್ತಿಯನ್ನು ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರು ಮೊದಲ ಸ್ಥಾನದಲ್ಲಿದ್ದಾರೆ. 

ಭಾರತ ತಂಡದ ಮತ್ತೊಬ್ಬ ಕಲಾತ್ಮಕ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಂತೆಯೇ ಕೆಎಲ್ ರಾಹುಲ್ 11ನೇ ಪಡೆದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.