ಬಿಜೆಪಿ ನಾಯಕರು ಕುಮುಟದ ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದ್ದಾರೆ: ಸಿ.ಎಂ ಸಿದ್ದರಾಮಯ್ಯ

Kannada News, Regional, Top News No Comments on ಬಿಜೆಪಿ ನಾಯಕರು ಕುಮುಟದ ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದ್ದಾರೆ: ಸಿ.ಎಂ ಸಿದ್ದರಾಮಯ್ಯ 10

ಬೆಂಗಳೂರು: ಹೊನ್ನಾವರದಲ್ಲಿ ನಡೆದ ಹಿಂದು ಯುವಕನ ಹತ್ಯೆಯ ಘಟನೆಗೆ ಕಾಂಗ್ರೆಸ್ ಕಾರಣ ಅನ್ನುವ ಬಿಜೆಪಿ ಪಕ್ಷದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು ಇಂತಹ ಘಟನೆಯನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ರಾಜಕೀಯ ಬಣ್ಣ ಕಟ್ಟುತ್ತಿದ್ದಾರೆ. ಸಾವನ್ನಪ್ಪಿರುವ ಯುಕವನ ಮರಣೋತ್ತರ ಪರೀಕ್ಷೆಯ ವರದಿ ಬಂದಿಲ್ಲ. ಏಕೆ ಸತ್ತಿದ್ದಾರೆ, ಹೇಗೆ ಸತ್ತಿದ್ದಾರೆ ಎಂಬ ಅಂಶಗಳ ಬಗ್ಗೆ ಮಾಹಿತಿ ಇಲ್ಲ. ಹೀಗಿರುವಾಗ ಇದು ಕೊಲೆ ಎಂದು ಹೇಳುವುದು ಸರಿಯಲ್ಲ ಎಂದರು.

ಬಿಜೆಪಿ ನಾಯಕರು ಕುಮುಟದ ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದ್ದಾರೆ. ಇದು ಕೇವಲ ರಾಜಕೀಯ ಉದ್ದೇಶಕ್ಕೆ ಬಿಜೆಪಿ ಮಾಡುತ್ತಿದೆ. ಚುನಾವಣೆ ಬರುತ್ತಿರುವುದರಿಂದ ಬಿಜೆಪಿಯವರು ರಾಜಕೀಯ ಲಾಭಕ್ಕೆ ಪಡೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

Related Articles

Leave a comment

Back to Top

© 2015 - 2017. All Rights Reserved.