ಜನವರಿಯಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ ಜಿಗ್ನೇಶ್ ಮೇವಾನಿ

BREAKING NEWS, Kannada News, Regional, Top News No Comments on ಜನವರಿಯಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ ಜಿಗ್ನೇಶ್ ಮೇವಾನಿ 18

ಬೆಂಗಳೂರು: ಗುಜರಾತ್’ನಲ್ಲಿ ಸಂಚಲನ ಮೂಡಿಸಿರುವ ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಜನವರಿಯಲ್ಲಿ ಕರ್ನಾಟಕ್ಕೆ ಆಗಮಿಸಲಿದ್ದಾರೆ. ವಿಜಯಪುರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ದಲಿತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸುತ್ತಿದ್ದಾರೆ.

ಗುಜರಾತ್ ಚುನಾವಣೆಯ ನಂತರ ಪ್ರಬಲ ದಲಿತ ಮುಖಂಡನಾಗಿ ಬೆಳಕಿಗೆ ಬಂದಿರುವ ಜಿಗ್ನೇಶ್ ಮೇವಾನಿ ಬಹುತೇಕ ಜನವರಿ ಎರಡನೇ ವಾರದಲ್ಲಿ ವಿಜಯಪುರಕ್ಕೆ ಆಗಮಿಸಿ ಅವರ ಕುಟುಂಬವನ್ನು ಭೇಟಿ ಮಾಡಿ ಜಿಗ್ನೇಶ್ ಸಾಂತ್ವನ ಹೇಳಲಿದ್ದಾರೆ ಎಂದು ಕಾಂಗ್ರೆಸ್‍ನ ಉನ್ನತ ಮೂಲಗಳು ತಿಳಿಸಿವೆ.

ಗುಜರಾತ್‍ನಲ್ಲಿ ಕಾಂಗ್ರೆಸ್ ಪರ ದಲಿತರನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಜಿಗ್ನೇಶ್ ಮೇವಾನಿ ಅವರನ್ನು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಪ್ರಚಾರಕ್ಕೆ ಬಳಸಿಕೊಳ್ಳಲು ಈಗಾಗಲೇ ಪಕ್ಷ ನಿರ್ಧರಿಸಿದೆ. ಇದಕ್ಕೆ ಜಿಗ್ನೇಶ್ ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ವಿಜಯಪುರದ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಲು ಕರೆಸುವುದು ಮತ್ತು ಆ ಮೂಲಕವೇ ಅವರು ರಾಜ್ಯದಲ್ಲಿ ತಮ್ಮ ಪ್ರಚಾರ ಯಾತ್ರೆಯನ್ನು ಆರಂಭಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕತ್ವ ಚಿಂತಿಸಿದೆ ಎನ್ನಲಾಗಿದೆ.

 

Related Articles

Leave a comment

Back to Top

© 2015 - 2017. All Rights Reserved.