24 ಸಾವಿರ ಕೋಟಿಗೆ ರಿಲಯನ್ಸ್ ಇಂಡಸ್ಟ್ರೀಸ್ ಖರೀದಿಸಿದ ಜಿಯೋ ಇನ್ಫೋಕಾಂ

Kannada News, Technology No Comments on 24 ಸಾವಿರ ಕೋಟಿಗೆ ರಿಲಯನ್ಸ್ ಇಂಡಸ್ಟ್ರೀಸ್ ಖರೀದಿಸಿದ ಜಿಯೋ ಇನ್ಫೋಕಾಂ 25

ಮುಂಬೈ: ಸಾಲದ ಸುಳಿಗೆ ಸಿಲುಕಿರುವ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯೂನಿಕೇಶನ್ಸ್(ಆರ್‌ಕಾಂ) ಸ್ಪೆಕ್ಟ್ರಂ ಟವರ್, ಆಪ್ಟಿಕಲ್ ಫೈಬರ್ ನೆಟ್‍ವರ್ಕ್ ಮತ್ತು ಇತರೆ ವೈರ್‌ಲೆಸ್‌ ಸಂಪತ್ತನ್ನು ಖರೀದಿಸಲು ಮುಕೇಶ್ ಅಂಬಾನಿ ಮುಂದಾಗಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಯ ಜಿಯೋ ಇನ್ಫೋಕಾಂ ಲಿಮಿಟೆಡ್‍ಗೆ ತನ್ನ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಿಲಯನ್ಸ್ ಕಮ್ಯೂನಿಕೇಷನ್ ಗುರುವಾರ ತಿಳಿಸಿದೆ.

ಎಷ್ಟು ಕೋಟಿ ರೂ.ಗಳ ಒಪ್ಪಂದ ನಡೆದಿದೆ ಎನ್ನುವುದನ್ನು ಎರಡೂ ಕಂಪೆನಿಗಳು ಬಹಿರಂಗ ಪಡಿಸಿಲ್ಲ. ಆದರೆ ಬ್ಯಾಂಕಿಂಗ್ ಮೂಲಗಳ ಪ್ರಕಾರ 24 ಸಾವಿರ ಕೋಟಿಗಳಿಂದ 25 ಸಾವಿರ ಕೋಟಿ ರೂ.ಗಳವರೆಗೆ ಈ ಒಪ್ಪಂದ ನಡೆದಿದೆ ಎಂದು ಅಂದಾಜಿಸಲಾಗಿದೆ. ಈ ಒಪ್ಪಂದ 2018ರ ಮಾರ್ಚ್ ಒಳಗಡೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.

45 ಸಾವಿರ ಕೋಟಿ ರೂ. ಸಾಲ ಸುಳಿಗೆ ಆರ್‌ಕಾಂ ಸಿಲುಕಿದ್ದು, ರಿಲಯನ್ಸ್ ಸ್ಥಾಪಕ ಧೀರೂಭಾಯಿ ಅಂಬಾನಿ ಅವರ 85 ಜನ್ಮ ದಿನಾಚರಣೆ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

Related Articles

Leave a comment

Back to Top

© 2015 - 2017. All Rights Reserved.