ಸಿಆರ್‍ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ: ಐವರು ಭದ್ರತಾ ಸಿಬ್ಬಂದಿ ಹುತಾತ್ಮ

Crime, Kannada News, National, Top News No Comments on ಸಿಆರ್‍ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ: ಐವರು ಭದ್ರತಾ ಸಿಬ್ಬಂದಿ ಹುತಾತ್ಮ 7

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಮಾದಲ್ಲಿನ ಸಿ.ಆರ್‍.ಪಿ ಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಉಗ್ರರನ್ನು ಸೆದೆಬಡಿಯಾಲಾಗಿದೆ.

ಜೈಷ್-ಎ-ಮಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. 4 ದಿನಗಳ ಹಿಂದೆ ಇದೇ ಜಿಲ್ಲೆಯಲ್ಲಿ ಜೈಷ್ ಉಗ್ರ ನೂರ್ ಮಹಮ್ಮದ್ ತಂತ್ರೇನನ್ನು ಎನ್‍ಕೌಂಟರ್ ಮಾಡಲಾಗಿತ್ತು. ನವೆಂಬರ್‍ನಲ್ಲಿ ಇದೇ ತಂಡದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಅವರಲ್ಲಿ ಜೈಷ್ ಮುಖ್ಯಸ್ಥ ಮಸೂದ್ ಸಝರ್‍ನ ಸಂಬಂಧಿಯೂ ಒಬ್ಬನಾಗಿದ್ದ. ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಉಗ್ರರು ಸಿ.ಆರ್‍.ಪಿ.ಎಫ್ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.

ತರಬೇತಿ ಕೇಂದ್ರದ 185ನೇ ಬೆಟಾಲಿಯನ್‍ನ ಆವರಣದೊಳಗೆ ನುಗ್ಗುವ ಮುನ್ನ ಗ್ರೆನೇಡ್ ಎಸೆದು ಗುಂಡಿನ ದಾಳಿ ಆರಂಭಿಸಿದ್ದರು ಸ್ಟೇಷನ್‍ನಲ್ಲಿ ಎಷ್ಟು ಮಂದಿ ಸಿ.ಆರ್‍.ಪಿ.ಎಫ್ ಯೊಧರನ್ನು ನಿಯೋಜಿಸಲಾಗಿತ್ತು ಎಂಬುದು ತಿಳಿದುಬಂದಿಲ್ಲ. ಆದರೆ ಕೆಲವೇ ಕ್ಷಣಗಳಲ್ಲಿ ಕಾರ್ಯಾಚರಣೆ ಶುರು ಮಾಡಲಾಯ್ತು.

Related Articles

Leave a comment

Back to Top

© 2015 - 2017. All Rights Reserved.