ಜನಾರ್ಧನ ಪೂಜಾರಿ ವಿಷಯಕ್ಕೆ ಕಣ್ಣೀರು ಹಾಕಿದ ಸಚಿವ ರಮಾನಾಥ ರೈ

Kannada News, Regional, Top News No Comments on ಜನಾರ್ಧನ ಪೂಜಾರಿ ವಿಷಯಕ್ಕೆ ಕಣ್ಣೀರು ಹಾಕಿದ ಸಚಿವ ರಮಾನಾಥ ರೈ 22

ಬಂಟ್ವಾಳ: ಸಚಿವ ರಮಾನಾಥ ರೈ ಅವರು ಭಾನುವಾರ ಬಿ.ಸಿ.ರೋಡ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ‘ಜನಾರ್ದನ ಪೂಜಾರಿ ಮತ್ತು ನನ್ನ ನಡುವೆ ಕೆಲವರು ಸಂಬಂಧ ಹಾಳು ಮಾಡುತ್ತಿದ್ದಾರೆ’ ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು ಬಿಲ್ಲವ ಮುಖಂಡ, ಬಿಜೆಪಿ ಮುಂದಾಳು ಹರಿಕೃಷ್ಣ ಬಂಟ್ವಾಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೂಜಾರಿ ಅವರ ವಿರುದ್ಧ ತನ್ನನ್ನು ವಿನಾ ಕಾರಣ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭ ಹೈಕಮಾಂಡ್ ಮಂಗಳೂರು ಕ್ಷೇತ್ರದಿಂದ ಎರಡು ಹೆಸರು ಕೇಳಿದರೂ ಜನಾರ್ದನ ಪೂಜಾರಿ ಅವರ ಒಂದೇ ಒಂದು ಹೆಸರು ಶಿಫಾರಸು ಮಾಡಿದವ ನಾನು. ಇಂದಿಗೂ ಪೂಜಾರಿ ಬಗ್ಗೆ ತನಗೆ ಅತೀವ ಗೌರವ ಇದೆ. ಪೂಜಾರಿ ಬಗ್ಗೆ ಅವಹೇಳನ ಮಾಡಿದ ಬಗ್ಗೆ ಪುರಾವೆ ಇದ್ದರೆ ಅಪಪ್ರಚಾರ ನಡೆಸುವವರು ಸಾಬೀತುಪಡಿಸಲಿ ಎಂದು ತಿಳಿಸಿದರು.

ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಮಂಗಳೂರಿನಲ್ಲಿ ಕಳೆದ ವಾರವಷ್ಟೇ ಸಾರ್ವಜನಿಕ ಸಮಾರಂಭದಲ್ಲಿ ಅರಣ್ಯ ಸಚಿವ ರಮಾನಾಥ ರೈ ತಮ್ಮ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದರು ಎಂದು ಕಣ್ಣೀರು ಹಾಕಿದ್ದರು.

Related Articles

Leave a comment

Back to Top

© 2015 - 2017. All Rights Reserved.