ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷಕ್ಕೆ ಭಕ್ತಿಪೂರ್ವಕ ಸ್ವಾಗತ

Kannada News, Regional, Top News No Comments on ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷಕ್ಕೆ ಭಕ್ತಿಪೂರ್ವಕ ಸ್ವಾಗತ 15

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷಕ್ಕೆ ಭಕ್ತಿಪೂರ್ವಕ ಸ್ವಾಗತ ಕೋರಿದ್ದು, ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

 ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ನಗರದ ಯೋಗ ನರಸಿಂಹ ಸ್ವಾಮಿ ದೇವಾಲಯದಿಂದ ಭಕ್ತರಿಗೆ ಲಾಡು ವಿತರಣೆ ಮಾಡುತ್ತಿದ್ದಾರೆ. ದೇವಾಲಯ ಭಕ್ತಾದಿಗಳಿಗೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸುಮಾರು ಎರಡು ಲಕ್ಷ ಲಾಡು ವಿತರಿಸುತ್ತಿದೆ. ದೇವಾಲಯಗಳಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ಹೊಸ ವರ್ಷದ ಪ್ರಯುಕ್ತ ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭಾಶಯ ಕೋರಿದ್ದು, ಎಲ್ಲರಿಗೂ ಆಂಗ್ಲ ನೂತನ ಸಂವತ್ಸರದ ಹಾರ್ದಿಕ ಶುಭಾಶಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.