ತಾಯಿಯಿಂದ ಬೇರ್ಪಟ್ಟ ಮರಿಯಾನೆಯನ್ನು ತಾಯಿ ಆನೆ ಜೊತೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ

BREAKING NEWS, Kannada News, Regional No Comments on ತಾಯಿಯಿಂದ ಬೇರ್ಪಟ್ಟ ಮರಿಯಾನೆಯನ್ನು ತಾಯಿ ಆನೆ ಜೊತೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ 12

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟ ಮರಿಯಾನೆಯನ್ನು ತಾಯಿ ಆನೆ ಜೊತೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟ ಘಟನೆಯೊಂದು ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರಕ್ಕೆ ಸೇರಿದ ಓಂಕಾರ ವಲಯದ ಕಾಡಂಚಿನ ಕುರುಬರಹುಂಡಿ ಗ್ರಾಮದ ಬಳಿ ಈ ಘಟನೆ ಜರುಗಿದ್ದು, ರಾತ್ರಿ ಸುಮಾರು 3 ಆನೆಗಳು ಗ್ರಾಮಕ್ಕೆ ಬಂದಿದ್ದು, ಗ್ರಾಮಸ್ಥರು ಆನೆಗಳನ್ನ ಓಡಿಸಿದ್ದರು. ಈ ವೇಳೆ ಮರಿಯಾನೆ ಅಲ್ಲೇ ಉಳಿದುಕೊಂಡಿತ್ತು. ಒಂದು ತಿಂಗಳ ಆನೆ ಮರಿಯನ್ನು ತಾಯಿ ಆನೆ ಬಿಟ್ಟು ಹೋಗಿದ್ದು, ಮರಿಯಾನೆ ನಿತ್ರಾಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ತದನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ನಿತ್ರಾಣ ಸ್ಥಿತಿಯಲ್ಲಿದ್ದ ಆನೆ ಮರಿಯನ್ನು ಗ್ರಾಮಸ್ಥರ ಸಹಾಯದಿಂದ ತಾಯಿ ಆನೆಯ ಜೊತೆ ಸೇರಿಸಲು ಪ್ರಯತ್ನಿಸಿದ್ದಾರೆ. ತಾಯಿ ಆನೆ ತನ್ನ ಮರಿಯನ್ನು ಹುಡುಕಿಕೊಂಡು ಬರುತ್ತದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಇರಿಸಿಕೊಂಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.