ಡಿವೈಡರ್’ಗೆ ಬೈಕ್ ಡಿಕ್ಕಿ ತಂಗಿ ಸ್ಥಳದಲ್ಲೇ ಸಾವು: ಅಣ್ಣನಿಗೆ ಗಂಭೀರ ಗಾಯ

Crime, Kannada News, Regional No Comments on ಡಿವೈಡರ್’ಗೆ ಬೈಕ್ ಡಿಕ್ಕಿ ತಂಗಿ ಸ್ಥಳದಲ್ಲೇ ಸಾವು: ಅಣ್ಣನಿಗೆ ಗಂಭೀರ ಗಾಯ 24

ಮಂಡ್ಯ: ಅತಿವೇಗದ ಕಾರಣ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ತಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಣ್ಣ ಗಂಭೀರವಾಗಿ ಗಾಯಗೊಂಡಿರುವ ಘೋರ ಘಟನೆಯೊಂದು ನಡೆದಿದೆ.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಘಟನೆ ನಡೆದಿದ್ದು, ಹುಣಸೂರು ಮೂಲದ ದಿವ್ಯಶ್ರೀ(19) ಮೃತ ದುರ್ದೈವಿ. ಆಕೆಯ ಅಣ್ಣ ಯೋಗೇಶ್ (21)ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ಬೈಕಿನಲ್ಲಿ ಮಂಡ್ಯದಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತೀ ವೇಗವಾಗಿ ಬಂದು ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಹೋದರಿ ದಿವ್ಯ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ ನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಶ್ರೀರಂಗ ಪಟ್ಟಣ ಪೊಲೀಸರು ಬಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Related Articles

Leave a comment

Back to Top

© 2015 - 2017. All Rights Reserved.