ಮೌಂಟ್ ಎವರೆಸ್ಟ್ ಸುತ್ತಾಡಿಕೊಂಡು ಬಂದ ಕಿಚ್ಚನ ಪತ್ನಿ, ಮಗಳು

Entertainment, Kannada News No Comments on ಮೌಂಟ್ ಎವರೆಸ್ಟ್ ಸುತ್ತಾಡಿಕೊಂಡು ಬಂದ ಕಿಚ್ಚನ ಪತ್ನಿ, ಮಗಳು 167

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಅವರ ಪತ್ನಿ ಮತ್ತು ಮುದ್ದಿನ ಮಗಳು ಮೌಂಟ್ ಎವರೆಸ್ಟ್ ಸುತ್ತಾಡಿಕೊಂಡು ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ಪತ್ನಿ ಪ್ರಿಯಾ ಸುದೀಪ್ ತಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಹೊಸ ವರ್ಷದ ಹಿನ್ನಲೆ ಪ್ರಿಯಾ ಸುದೀಪ್ ಇತ್ತೀಚಿಗೆ ವಿಮಾನದಲ್ಲಿ ಮೌಂಟ್ ಎವೆರೆಸ್ಟ್ ಪರ್ವತವನ್ನ ಸುತ್ತಿ ಬಂದಿದ್ದಾರೆ. ಪ್ರಿಯಾ ಅವರ ಜೊತೆಯಲ್ಲಿ ತಮ್ಮ ಮಗಳು ಸ್ವಾನಿಯನ್ನು ಕರೆದುಕೊಂಡು ಹೋಗಿದ್ದು, ಹೊಸ ವರ್ಷದ ನೆನಪಿಗಾಗಿ ಸುಮಧುರ ಕ್ಷಣಗಳನ್ನು ಕಳೆದು ಬಂದಿದ್ದಾರೆ.

ಮೌಂಟ್ ಎವರೆಸ್ಟ್ ನಲ್ಲಿ ಕಳೆದ ಕ್ಷಣಗಳು, ಖುಷಿ, ಎಲ್ಲಾ ಅನುಭವಗಳನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ. “ಹದ್ದಿನ ರೀತಿಯಲ್ಲಿ ಪರ್ವತವನ್ನ ಸುತ್ತಿದ ಹಾಗೆ ಅನುಭವ ಆಯ್ತು. ಭವ್ಯವಾದ ಮೌಂಟ್ ಎವೆರೆಸ್ಟ್ ನೋಡಿದ ಅನುಭವ ಎಂದಿಗೂ ಮರೆಯಲಾಗದು” ಎಂದು ಫೋಟೋಗಳನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

https://twitter.com/iampriya06/status/948913149150818306

Related Articles

Leave a comment

Back to Top

© 2015 - 2017. All Rights Reserved.