ಮೈಸೂರು ಪೊಲೀಸ್ ಸಿಬ್ಬಂದಿಗೂ ಐಎಸ್‍ಐ ಮಾರ್ಕ್ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶ

BREAKING NEWS, Kannada News, Regional, Top News No Comments on ಮೈಸೂರು ಪೊಲೀಸ್ ಸಿಬ್ಬಂದಿಗೂ ಐಎಸ್‍ಐ ಮಾರ್ಕ್ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶ 24

ಮೈಸೂರು: ಪೊಲೀಸ್ ಸಿಬ್ಬಂದಿಗಳು ಸಹ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಐಎಸ್‍ಐ ಗುಣಮಟ್ಟದ ಹೆಲ್ಮೆಟ್ ಧರಿಸಿದುವಂತೆ ನಗರ ಪೊಲೀಸ್ ಆಯುಕ್ತರಾದ ಸುಬ್ರಮಣ್ಯೇಶ್ವರ ರಾವ್ ಸುತ್ತೋಲೆ ಹೊರಡಿಸಿದ್ದಾರೆ.

ನಗರದಲ್ಲಿ ಕೆಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಬಿಐಎಸ್‍ ಅಥವಾ ಐಎಸ್‍ಐ ಗುಣಮ್ಟವಲ್ಲದ ಹಾಗೂ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಕರ್ತವ್ಯಕ್ಕಾಗಿ ವಿತರಿಸಲಾಗಿರುವ ಹೆಲ್ಮೆಟ್ ಧರಿಸಿ ದ್ವಿಚಕ್ರವಾಹಗಳಲ್ಲಿ ಸವಾರಿ ಮಾಡುತ್ತಿರುವುದು ಕಂಡು ಬರುತ್ತಿದ್ದು, ಸಾರ್ವಜನಿಕರ ವಲಯದಲ್ಲಿ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೆ ಎಡೆ ಮಾಡಿಕೊಡುತ್ತಿದೆ. ಹೀಗಾಗಿ ನಗರದ ಎಲ್ಲಾ ಘಟಕಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕರ್ತವ್ಯದ ಅವಧಿಯಲ್ಲಿ ಮತ್ತು ರಜೆ/ವಿಶ್ರಾಂತಿಯ ಅವಧಿಯಲ್ಲಿ ದ್ವಿಚಕ್ರವಾಹನ ಸವಾರಿ ಅಥವಾ ಹಿಂಬದಿ ಸವಾರಿ ಮಾಡುವಾಗ ಕಡ್ಡಾಯವಾಗಿ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು. ಯಾವುದೇ ಕಾರಣಕ್ಕೂ ಕಳಪೆ ಹೆಲ್ಮೆಟ್ ಹಾಗೂ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಗೆ ವಿತರಿಸಲಾದ ಹೆಲ್ಮೆಟ್‍ಗಳನ್ನು ಧರಿಸಬಾರದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಆಯಾ ಠಾಣಾ ಅಧಿಕಾರಿಗಳು ತನ್ನ ಸಿಬ್ಬಂದಿಗೆ ತಿಳುವಳಿಕೆ ನೀಡಬೇಕು. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ ಠಾಣೆ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಐಎಸ್‍ಐ ಮಾರ್ಕ್ ಇಲ್ಲದ ಅರ್ಧ ಹೆಲ್ಮೆಟ್ ಹೊಂದಿದ್ದ ಪೇದೆಯ ಕಳಪೆ ಹೆಲ್ಮೆಟನ್ನು ಸಾರ್ವಜನಿಕರೇ ಒಡೆದು ಹಾಕಿದ್ದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇನ್ಮುಮುಂದೆ ಪೊಲೀಸರೂ ಸಹ ದ್ವಿಚಕ್ರ ವಾಹನ ಸವಾರಿ ಮಾಡುವಾಗ ಕಡ್ಡಾಯವಾಗಿ ಬಿಐಎಸ್/ಐಎಸ್‍ಐ ಮಾರ್ಕ್ ಉಳ್ಳ ಹೆಲ್ಮೆಟ್ ಧರಿಸಬೇಕೆಂದು ಸೂಚನೆ ನೀಡಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.