ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಹಾರಾಜ ಯದುವೀರ್

Kannada News, Regional No Comments on ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಹಾರಾಜ ಯದುವೀರ್ 25

ಮೈಸೂರು: ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಅಂಬವಿಲಾಸ ಅರಮನೆಯ ಬಳಿ ಇರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕು ಮೊದಲು ಇಂದು ಬೆಳಿಗ್ಗೆ ಕೋಟೆ ಆಂಜನೇಯ ದೇವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ನಂತರ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕ್ಷೀರಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ ಜನತೆಗೆ ದೇವಿ ಸದಾ ಒಳ್ಳೆಯದನ್ನೇ ಮಾಡಲಿ ಎಂದು ಕೋಟೆ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇನೆ ಹಾಗೆಯೆ ಎಲ್ಲಾ ದೇವಾಲಯಗಳಿಗು ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಚಿತ್ರಗಳು: ಶ್ರೇಯಸ್ ದೇವನೂರು

Related Articles

Leave a comment

Back to Top

© 2015 - 2017. All Rights Reserved.