ಸಚಿನ್ ತೆಂಡೂಲ್ಕರ್ ಪುತ್ರಿಗೆ ಮದುವೆಯಾಗುವಂತೆ ಬೆದರಿಕೆ ಹಾಕಿದವನ ಬಂಧನ

Kannada News, Sports No Comments on ಸಚಿನ್ ತೆಂಡೂಲ್ಕರ್ ಪುತ್ರಿಗೆ ಮದುವೆಯಾಗುವಂತೆ ಬೆದರಿಕೆ ಹಾಕಿದವನ ಬಂಧನ 50

ಮುಂಬೈ: ವಿಶ್ವ ಕ್ರಿಕೆಟ್‍ನ ದಂತ ಕಥೆ, ಭಾರತೀಯ ಕ್ರಿಕೆಟ್ ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿರಿಯ ಪುತ್ರಿ ಸಾರಾಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ದೇವ್ ಕುಮಾರ್ ಮೈಟಿ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಪುರ್ಬಾ ಮೆಡಿನಿಪುರ್ ಜಿಲ್ಲೆಯ ನಿವಾಸಿ ಎಂದು ತಿಳಿದು ಬಂದಿದೆ. 32 ವರ್ಷದ ಈತ ಇತ್ತೀಚೆಗೆ ಹಲವು ದಿನಗಳಿಂದ ಸಾರಾ ತೆಂಡೂಲ್ಕರ್ ಕುರಿತು ಪೋಸ್ಟ್ ಗಳನ್ನು ಮತ್ತು ಅವಹೇಳನಕಾರಿ ಕಮೆಂಟ್ ಗಳನ್ನು ಹಾಕುತ್ತಿದ್ದನು ಎಂದು ಹೇಳಲಾಗಿದೆ.

ಸಾರಾಗೆ ನನ್ನನ್ನು ಮದುವೆಯಾಗು ಇಲ್ಲವಾದರೆ ನಿನ್ನನ್ನು ಅಪಹರಣ ಮಾಡುತ್ತೇನೆ ಎಂದು ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ಸಚಿನ್ ಅವರ ಮುಂಬೈ ಮನೆ ಮುಂದೆ ಬಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ದೇವ್ ಕುಮಾರ್ ಮೈಟಿ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ದೇವ್ ಒಬ್ಬ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಕೆಲಸವಿಲ್ಲದೇ ನಿರುದ್ಯೋಗಿಯಾಗಿದ್ದಾನೆ. ಅಷ್ಟೇ ಅಲ್ಲದೇ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ನಿಲ್ಲಿಸಿದ್ದಾನೆ ಎಂದು ಆರೋಪಿಯ ಕುಟುಂಬಸ್ಥರು ಹೇಳಿದ್ದಾರೆ.

 

Related Articles

Leave a comment

Back to Top

© 2015 - 2017. All Rights Reserved.