ಚಿಕ್ಕಮಗಳೂರಿನ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ನೈತಿಕ ಪೊಲೀಸ್‍ ಗಿರಿಗೆ ಯುವತಿ ಆತ್ಮಹತ್ಯೆ

BREAKING NEWS, Crime, Kannada News, Regional, Top News No Comments on ಚಿಕ್ಕಮಗಳೂರಿನ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ನೈತಿಕ ಪೊಲೀಸ್‍ ಗಿರಿಗೆ ಯುವತಿ ಆತ್ಮಹತ್ಯೆ 50

ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧನ್ಯಶ್ರೀ ಸಾವಿಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನೈತಿಕ ಪೊಲೀಸ್‍ ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಮೂಡುಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಧನ್ಯಶ್ರೀಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ. ಇದರಿಂದ ಮನನೊಂದು ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

‘ಮುಸ್ಲಿಂ ಯುವಕನೊಂದಿಗೆ ಧನ್ಯಶ್ರೀ ಸುತ್ತಾಡುತ್ತಿರುವುದರಿಂದ ಹಿಂದೂಪರ ಕಾರ್ಯಕರ್ತರು ಈಕೆಗೆ ಧಮ್ಕಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಧನ್ಯಶ್ರೀ ಮನೆಗೆ ಹೋಗಿ ನಿಮ್ಮ ಮಗಳಿಗೆ ಬುದ್ಧಿವಾದ ಹೇಳಿ ಎಂದು ಆಕೆಯ ತಾಯಿಗೂ ಧಮ್ಕಿ ಹಾಕಿದ್ದಾರೆ. ಇದೆಲ್ಲ ಆದ ಬಳಿಕ ಸಮಾಜದಲ್ಲಿ ಬದುಕುವುದು ಹೇಗೆ ಎಂದು ಮನನೊಂದು ಆತ್ಮಹ್ತತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಎಲ್ಲಾವುದನ್ನು ಧನ್ಯಶ್ರೀ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಅನಿಲ್ ಮೂಡಿಗೆರೆ ನಗರ ಘಟಕದ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ಎಂದು ತಿಳಿಸಿದ್ದಾರೆ.

ಏನಿದು ಘಟನೆ

ಮೂಡಿಗೆರೆಯ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಧನ್ಯಶ್ರೀ(20) ಎಂಬಾಕೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಳು. ಜಿಲ್ಲೆಯ ಮೂಡಿಗೆರೆಯಲ್ಲಿ ಪ್ರಥಮ ಬಿಕಾಂ ಪದವಿ ಓದುತ್ತಿದ್ದ ಧನ್ಯಶ್ರೀ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು. ಯಾವಾಗಲು ಮೊಬೈಲ್‍ಲ್ಲಿ ಇರುತ್ತೀಯ, ಓದುವುದಿಲ್ಲ ಎಂದು ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆಕೆಯ ತಂದೆ ಮೂಡಿಗೆರೆಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಘಟನೆ ಸಂಬಂಧ ಎಫ್‍ಐಆರ್ ಕೂಡ ಅದೇ ರೀತಿ ದಾಖಲಾಗಿತ್ತು. ಆದರೆ ಧನ್ಯಶ್ರೀ ಮೊಬೈಲ್‍ನಲ್ಲಿ ತನ್ನ ಸ್ನೇಹಿತನ ಜೊತೆ ತುಳುವಿನಲ್ಲಿ ಮಾಡಿರುವ ಮೆಸೇಜ್‍ಗಳು ದೊರೆತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Related Articles

Leave a comment

Back to Top

© 2015 - 2017. All Rights Reserved.