ಜ.10 ರಂದು ಸಿಎಂರಿಂದ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಸವಲತ್ತು ವಿತರಣೆ

Kannada News, Regional No Comments on ಜ.10 ರಂದು ಸಿಎಂರಿಂದ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಸವಲತ್ತು ವಿತರಣೆ 11

ತಾಲೂಕಿನ ನಾಗವಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ 406.48 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ನಾಗವಳ್ಳಿಯಲ್ಲಿ ನೆರವೇರಿಸಲಿದ್ದಾರೆ.

ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ.ಪಾಟೀಲ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸÀಣ್ಣ ನೀರಾವರಿ ಸಚಿವರಾದ ಟಿ.ಬಿ. ಜಯಚಂದ್ರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಟ್ ಸಚಿವರಾದ ತನ್ವೀರ್ ಸೇಠ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ, ಸಾರಿಗೆ ಸಚಿವರಾದ ಎಚ್,ಎಂ. ರೇವಣ್ಣ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಎಚ್. ಅಂಜನೇಯ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಎ. ಮಂಜು, ಪ್ರವಾಸೋದ್ಯಮ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಮತ್ತು ಹಜ್ ಸಚಿವರಾದ ಆರ್. ರೋಷನ್‍ಬೇಗ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಸಂಸದರಾದ ಆರ್. ಧ್ರುವನಾರಾಯಣ, ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಹನೂರು ಶಾಸಕರಾದ ಆರ್. ನರೇಂದ್ರ, ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು(ಸಂದೇಶ್ ನಾಗರಾಜು), ಅರ್, ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲೀಖಾನ್, ನಗರಸಭೆ ಅಧ್ಯಕ್ಷರಾದ ಶೋಭಾ, ನಾಗವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಮಲಾಕ್ಷಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜಿ. ಯೋಗೇಶ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಎಂ. ರಾಜಪ್ಪ, ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾದ ಎಂ.ಡಿ. ಕೃಷ್ಣಮೂರ್ತಿ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೊಳ್ಳೇಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ

ಜಿಲ್ಲಾಡಳಿತ ವತಿಯಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 176.94 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಮಧ್ಯಾಹ್ನ 12 ಗಂಟೆಗೆ ಕೊಳ್ಳೇಗಾಲ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ನೆರವೇರಿಸಲಿದ್ದಾರೆ.

ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಎಸ್. ಜಯಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸÀಣ್ಣ ನೀರಾವರಿ ಸಚಿವರಾದ ಟಿ.ಬಿ. ಜಯಚಂದ್ರ, ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರಾದ ಬಿ. ರಮಾನಾಥ ರೈ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಟ್ ಸಚಿವರಾದ ತನ್ವೀರ್ ಸೇಠ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ, ಸಾರಿಗೆ ಸಚಿವರಾದ ಎಚ್,ಎಂ. ರೇವಣ್ಣ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಎಚ್. ಅಂಜನೇಯ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಎ. ಮಂಜು, ವಸತಿ ಸಚಿವರಾದ ಎಂ.ಕೃಷ್ಣಪ್ಪ, ಪೌರಾಡಳಿತ ಸಚಿವರಾದ ಈಶ್ವರ್ ಬಿ. ಖಂಡ್ರೆ, ನಗರಾಭಿವೃದ್ಧಿ ಮತ್ತು ಹಜ್ ಸಚಿವರಾದ ಆರ್. ರೋಷನ್‍ಬೇಗ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಸಂಸದರಾದ ಆರ್. ಧ್ರುವನಾರಾಯಣ, ಚಾಮರಾಜನಗರ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಹನೂರು ಶಾಸಕರಾದ ಆರ್. ನರೇಂದ್ರ, ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು(ಸಂದೇಶ್ ನಾಗರಾಜು), ಅರ್, ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶಾಂತರಾಜು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜಿ. ಯೋಗೇಶ್, ಎ.ಪಿ.ಎಂ.ಸಿ ಅಧ್ಯಕ್ಷರಾದ ರಾಜಪ್ಪ, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಯಳಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ನಂಜುಂಡಯ್ಯ, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಲಿಂಗರಾಜು ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ

ಜಿಲ್ಲಾಡಳಿತ ವತಿಯಿಂದ ಹನೂರು ವಿಧಾನಸಭಾ ಕ್ಷೇತ್ರದ 111.10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10ರಂದು ಮಧ್ಯಾಹ್ನ 3 ಗಂಟೆಗೆ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನೆರವೇರಿಸಲಿದ್ದಾರೆ.

ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಹನೂರು ವಿಧಾನಸಭಾ ಸದಸ್ಯರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು.

ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಸಾರಿಗೆ ಸಚಿವರಾದ ಎಚ್.ಎಂ. ರೇವಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವರಾದ ಟಿ.ಬಿ ಜಯಚಂದ್ರ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರಾದ ರಮಾನಾಥ ರೈ, ಸಮಾಜ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಪಶು ಸಂಗೋಪನಾ ಸಚಿವರಾದ ಎ. ಮಂಜು, ವಸತಿ ಸಚಿವರಾದ ಎಂ. ಕೃಷ್ಣಪ್ಪ, ಧಾರ್ಮಿಕ ದತ್ತಿ ಮತ್ತು ಮುಜರಾಯಿ ಸಚಿವರಾದ ರುದ್ರಪ್ಪ ಮನ್ನಪ್ಪ ಲಮಾಣಿ, ಸಹಕಾರ ಸಚಿವರಾದ ಜಾರಕಿಹೊಳಿ ರಮೇಶ್ ಲಕ್ಷಣರಾವ್, ಕೃಷಿ ಸಚಿವರಾದ ಕೃಷ್ಣಬೈರೇಗೌಡ, ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅವರುಗಳು ಘನ ಉಪಸ್ಥಿತಿ ವಹಿಸುವರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲದ ಶಾಸಕರಾದ ಎಸ್. ಜಯಣ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮತ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೊಳ್ಳೇಗಾಲದ ಕೃಷಿ ಉತ್ಪನ್ನ ಸಮಿತಿ ಅಧ್ಯಕ್ಷರಾದ ಬಿ. ರಾಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Related Articles

Leave a comment

Back to Top

© 2015 - 2017. All Rights Reserved.