ಚಿತ್ರ ಮಂದಿರದಲ್ಲಿ ರಾಷ್ಟ್ರಗೀತೆ ಕಡ್ಡಾಯ ಬೇಡ: ಸುಪ್ರೀಂ ಕೋರ್ಟ್’ಗೆ ಕೇಂದ್ರ ಮನವಿ

Kannada News, National No Comments on ಚಿತ್ರ ಮಂದಿರದಲ್ಲಿ ರಾಷ್ಟ್ರಗೀತೆ ಕಡ್ಡಾಯ ಬೇಡ: ಸುಪ್ರೀಂ ಕೋರ್ಟ್’ಗೆ ಕೇಂದ್ರ ಮನವಿ 23

ನವದೆಹಲಿ: ಚಿತ್ರ ಮಂದಿರದಲ್ಲಿ ಚಿತ್ರ ಪ್ರದರ್ಶನ ಆರಂಭವಾಗುವುದಕ್ಕಿಂತ ಮುನ್ನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್’ಗೆ ಮನವಿ ಮಾಡಿದೆ.

ಈ ಹಿಂದೆ ಕೇವಲ ಚಿತ್ರಮಂದಿರಗಳಲ್ಲಿ ಮಾತ್ರವಲ್ಲ, ಶಿಕ್ಷಣ ಸಂಸ್ಥೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ ಮಾಡುವಂತೆ ಕೇಂದ್ರ ಸರ್ಕಾರ ವಕಾಲತ್ತುನ್ನು ಮಾಡಿತ್ತು. ಆದರೆ, ಇದೀಗ ಸರ್ಕಾರ ಏಕಾಏಕಿ ತನ್ನ ನಿಲುವನ್ನು ಬದಲಾಯಿಸಿದೆ.

ಇನ್ನೂ ಈ ನಿಲುವನ್ನು ಬದಲಾಯಿಸಿಕೊಂಡ ಕೇಂದ್ರ ಸರ್ಕಾರ, ಈ ಸಂಬಂಧ ವಿಧಿ, ವಿಧಾನ ರೂಪಿಸಲು ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಆರು ತಿಂಗಳೊಳಗಾಗಿ ಸಮಿತಿಯು ವರದಿ ನೀಡಲಿದ್ದು, ಅಲ್ಲಿಯವರೆಗೆ ರಾಷ್ಟ್ರಗೀತೆ ಕಡ್ಡಾಯ ಬೇಡ ಎಂದು ಸುಪ್ರಿಂ ಕೋರ್ಟ್ ಗೆ ಮನವಿ ಮಾಡಿದೆ.

Related Articles

Leave a comment

Back to Top

© 2015 - 2017. All Rights Reserved.