ಆರ್. ಅಶೋಕ್ ವಿರುದ್ಧ ಎಫ್.ಐಆರ್ ದಾಖಲು: ಮಾಜಿ ಡಿಸಿಎಂ’ಗೆ ಬಂಧನದ ಭೀತಿ

BREAKING NEWS, Crime, Kannada News, Regional, Top News No Comments on ಆರ್. ಅಶೋಕ್ ವಿರುದ್ಧ ಎಫ್.ಐಆರ್ ದಾಖಲು: ಮಾಜಿ ಡಿಸಿಎಂ’ಗೆ ಬಂಧನದ ಭೀತಿ 6

ಬೆಂಗಳೂರು: ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಬಂಧನದ ಭೀತಿ ಎದುರಾಗಿದೆ.

ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಆರ್. ಅಶೋಕ್ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ.

ಬಗರ್ ಹುಕುಂ ಭೂ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಆರ್. ಅಶೋಕ್ ಸಾಗುವಳಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಇದರ ಹಿಂದೆ ಭ್ರಷ್ಟಚಾರ ಇದೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಈಗ ಆರ್ ಅಶೋಕ್ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.