ಸಿಎಂ ಸಿದ್ದರಾಮಯ್ಯ ತಲೆತಿರುಕ ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಾನೆ: ಬಿ.ಎಸ್.ಯಡಿಯೂರಪ್ಪ

Kannada News, Regional No Comments on ಸಿಎಂ ಸಿದ್ದರಾಮಯ್ಯ ತಲೆತಿರುಕ ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಾನೆ: ಬಿ.ಎಸ್.ಯಡಿಯೂರಪ್ಪ 10

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ತಲೆತಿರುಕ ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕೋಟೆನಾಡು ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ, ಗೋಮಾಂಸ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ತಿನ್ನದೆ ಇರೋದು ಏನಿದೆ..? ಜೈಲಿಗೆ ಹೋಗಿ ಬಂದವರೆಂದು ಪದೇ ಪದೇ ಸಿಎಂ ಹೇಳಿದರೆ ಜನ ಬಡಿಗೆ ತೆಗೆದುಕೊಳ್ಳುತ್ತಾರೆ. ಆಗ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಚ್ಚರವಿರಲಿ ಎಂದಿದ್ದಾರೆ.

ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದು, ಕೊಲೆ ಸುಲಿಗೆ ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದಲಿತರು ವಿಜಯಪುರ ಚಲೋ ಹೋರಾಟವನ್ನು ತಡೆಯುತ್ತಿರುವ ಸರ್ಕಾರದ ನಿರ್ಧಾರ ತಪ್ಪಾಗಿದೆ. ಅವರಿಗೆ ಶಾಂತಿಯುತ ಹೋರಾಟಕ್ಕೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತ ಪರ ನಿಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರದಲ್ಲಿ ನಾವು ಸ್ಪರ್ಧಿಸುತ್ತೇವೆ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a comment

Back to Top

© 2015 - 2017. All Rights Reserved.