ಇನ್ನು 4 ವಾರಗಳಲ್ಲಿ ಕಾವೇರಿ ತೀರ್ಪು: ಕರ್ನಾಟಕಕ್ಕೆ ಡವಡವ

Kannada News, National, Regional, Top News No Comments on ಇನ್ನು 4 ವಾರಗಳಲ್ಲಿ ಕಾವೇರಿ ತೀರ್ಪು: ಕರ್ನಾಟಕಕ್ಕೆ ಡವಡವ 13

ನವದೆಹಲಿ: 2007ರಲ್ಲಿ ಕಾವೇರಿ ನದಿ ನೀರು ಹಂಚಿಕೆ ಮಾಡಿ ಕಾವೇರಿ ನ್ಯಾಯಾಧಿಕರಣ ನೀಡಿರುವ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು, ಕೇರಳ ಸರ್ಕಾರಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯ ತೀರ್ಪು ಇನ್ನು  4 ವಾರಗಳಲ್ಲಿ ಸುಪ್ರೀಂ ಕೋರ್ಟ್`ನಿಂದ ಹೊರಬೀಳಲಿದೆ. ಜತೆಗೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗುತ್ತಾ ಎಂಬ ಆತಂಕವೂ ಮೂಡಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ.ಎಂ ಖನ್ವಿಲ್ಕರ್, ನ್ಯಾ. ಡಿ.ವೈ ಚಂದ್ರಚೂಡ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್​ನ ತ್ರಿಸದಸ್ಯ ಪೀಠದಿಂದ ಅರ್ಜಿಗಳ ವಿಚಾರಣೆ ನಡೆದಿದೆ. ಸೆಪ್ಟೆಂಬರ್ 20, 2017ಕ್ಕೆ ವಿಚಾರಣೆ ಮುಗಿಸಿದ್ದ ನ್ಯಾಯಪೀಠ ತೀರ್ಪನ್ನ ಕಾಯ್ದಿರಿಸಿತ್ತು. ಇದೀಗ, ಒಂದು ತಿಂಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಕಿರಣ್ ಮೊಜುಂದಾರ್ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ತಿಂಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

Related Articles

Leave a comment

Back to Top

© 2015 - 2017. All Rights Reserved.