ಕಾಂಗ್ರೆಸ್ ಸರ್ಕಾರದ ಆಡಳಿತಾವದಿಯಲ್ಲಿ ಕೇವಲ ಕಾಂಗ್ರೆಸ್ ಮುಖಂಡರ ಅಭಿವೃದ್ಧಿಯಷ್ಟೇ ಆಗುತ್ತಿದೆ: ಅಮಿತ್ ಷಾ

Kannada News, Regional, Top News No Comments on ಕಾಂಗ್ರೆಸ್ ಸರ್ಕಾರದ ಆಡಳಿತಾವದಿಯಲ್ಲಿ ಕೇವಲ ಕಾಂಗ್ರೆಸ್ ಮುಖಂಡರ ಅಭಿವೃದ್ಧಿಯಷ್ಟೇ ಆಗುತ್ತಿದೆ: ಅಮಿತ್ ಷಾ 14

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ 2.19 ಲಕ್ಷ ಕೋಟಿ ರೂ. ಅನುದಾನ ಬಂದಿದೆ ಆದರೆ ಸಿದ್ದರಾಮಯ್ಯ ಆ ಅನುದಾನವನ್ನು ದುರಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತಾವದಿಯಲ್ಲಿ ಕೇವಲ ಕಾಂಗ್ರೆಸ್ ಮುಖಂಡರ ಅಭಿವೃದ್ಧಿ ಅಷ್ಟೇ ಆಗುತ್ತಿದೆ. ಐದು ವರ್ಷದ ಹಿಂದೆ ಮಧ್ಯಮವರ್ಗದವರಾಗಿದ್ದ ಕಾಂಗ್ರೆಸ್ ಮುಖಂಡರು ಈಗ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಶ್ರೀಮಂತರಾಗಿದ್ದಾರೆ.

ಸಿದ್ದರಾಮಯ್ಯ ಅವರಿಗೆ 70 ಲಕ್ಷ ರೂಪಾಯಿಯ ಗಡಿಯಾರ ಉಡುಗೊರೆಯಾಗಿ ಬರುತ್ತದೆ, ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟಿರುವ ಕಾರಣದಿಂದಲೇ ಅವರಿಗೆ ಈ ರೀತಿಯ ಭಾರಿ ಬೆಲೆಯ ಉಡುಗೊರೆಗಳು ಸಿಗುತ್ತವೆ ಎಂದು ವ್ಯಂಗ್ಯವಾಡಿದರು.

Related Articles

Leave a comment

Back to Top

© 2015 - 2017. All Rights Reserved.