ಶಾಸಕ ಅಂಬರೀಶ್ ಒಬ್ಬ ನಾಮರ್ಧ ಎಂದ ಜೆಡಿಎಸ್ ಅಭ್ಯರ್ಥಿ

Kannada News, Regional No Comments on ಶಾಸಕ ಅಂಬರೀಶ್ ಒಬ್ಬ ನಾಮರ್ಧ ಎಂದ ಜೆಡಿಎಸ್ ಅಭ್ಯರ್ಥಿ 16

ಮಂಡ್ಯ: ಶಾಸಕ ಅಂಬರೀಶ್ ಒಬ್ಬ ನಾಮರ್ಧ, ಕ್ಷೇತ್ರದಲ್ಲಿ ಏನೂ ಕೆಲಸ ಮಾಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರಿಗೆ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಜಿಲ್ಲಾ ಪಂಚಾಯಿತಿ ಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ. ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದರೂ ಕ್ಷೇತ್ರಕ್ಕೆ ಒಂದೇ ಒಂದು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಯೋಗೇಶ್ ಬೂದನೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಹಿನ್ನೆಲೆ ಅಂಬರೀಷ್ ಅವರನ್ನು ತರಾಟೆಗೆ ತೆಗೆದುಕೊಂಡು ಮತದಾರರನ್ನು ಓಲೈಸುವ ಪ್ರಯತ್ನ ಮಾಡಿದ್ದು ವಿಶೇಷವಾಗಿತ್ತು.

Related Articles

Leave a comment

Back to Top

© 2015 - 2017. All Rights Reserved.