ಗುಂಡ್ಲುಪೇಟೆ: ಜ. 12, 13ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Kannada News, Regional No Comments on ಗುಂಡ್ಲುಪೇಟೆ: ಜ. 12, 13ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 34

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಗುಂಡ್ಲುಪೇಟೆ ಗುರುಭವನದಲ್ಲಿ ಜನವರಿ 12 ಹಾಗೂ 13ರಂದು ನಡೆಯಲಿದೆ.

ಜನವರಿ 12ರಂದು ಬೆಳಿಗ್ಗೆ 10.30 ಗಂಟೆಗೆ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಖ್ಯಾತ ಸಾಹಿತಿಗಳಾದ ಸಿ. ನಾಗಣ್ಣ ಸಮ್ಮೇಳನ ಉದ್ಘಾಟಿಸುವರು. ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್. ಆಶಯ ನುಡಿ ನುಡಿಯುವರು.

ಸಂಸದರಾದ ಆರ್. ಧ್ರುವನಾರಾಯಣ ದಿ. ಮುದ್ದು ಮಾದಪ್ಪ ದತ್ತಿ ಪ್ರಶಸ್ತಿಯನ್ನು ಸಾಹಿತಿಗಳಾದ ಶೀಲಾ ಸತ್ಯೇಂದ್ರಸ್ವಾಮಿ ಅವರಿಗೆ ಪ್ರಧಾನ ಮಾಡುವರು. ಹಿರಿಯ ಸಾಹಿತಿ ಮತ್ತು ಸಂಶೋಧಕರಾದ ಜಿ.ಜಿ. ಮಂಜುನಾಥನ್ ಸಮೇಳನಾಧ್ಯಕ್ಷರ ನುಡಿಗಳನ್ನಾಡುವರು.

ಖ್ಯಾತ ಸಾಹಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡುವರು. ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಎಂ. ನಾಗಮಲ್ಲಪ್ಪ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಸೋಮಶೇಖರ ಬಿಸಲ್ವಾಡಿ ಪುಸ್ತಕ ಲೋಕಾರ್ಪಣೆ ಮಾಡುವರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಧ್ವಜಾರೋಹಣ ನೆರವೇರಿಸುವರು. 8.30 ಗಂಟೆಗೆ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್. ಮಹೇಶ್ ಮೆರವಣಿಗೆಗೆ ಚಾಲನೆ ನೀಡುವರು. ಪುರಸಭೆ ಉಪಾಧ್ಯಕ್ಷರಾದ ಜಿ.ಕೆ. ನಾಗೇಂದ್ರ ಪುಷ್ಪಾರ್ಚನೆ ಮಾಡುವರು. ಆರಕ್ಷಕ ಉಪನಿರೀಕ್ಷಕರಾದ ಬಿ.ಎಸ್. ಶಿವರುದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.

ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು ಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

Related Articles

Leave a comment

Back to Top

© 2015 - 2017. All Rights Reserved.