ಸಿಎಂ ಸಿದ್ದರಾಮಯ್ಯರಿಗೆ ಗೌರವ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯ ಮನವಿ

BREAKING NEWS, Kannada News, Regional, Top News No Comments on ಸಿಎಂ ಸಿದ್ದರಾಮಯ್ಯರಿಗೆ ಗೌರವ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯ ಮನವಿ 28

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸ್ಸು
ಮಾಡಿದ್ದಾರೆ.

2018ನೇ ಸಾಲಿನ ಘಟಿಕೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯಗೆ ಡಾಕ್ಟರೇಟ್ ಪ್ರಧಾನ ಮಾಡಲು ಶಿಫಾರಸ್ಸು ಮಾಡಿರುವ ಸಿಂಡಿಕೇಟ್ ಸದಸ್ಯ M.S.S ಕುಮಾರ್​, ಸಮಾಜದಲ್ಲಿ ಅಪ್ರತಿಮ ಸಾಧಕರಿಗೆ ನೀಡುವ ಗೌರವ ಡಾಕ್ಟರೇಟ್ ನೀಡಲು ಮನವಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಇದೆ ವಿವಿಯಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಬಡತನದಿಂದ ಕಲಿತದ್ದನ್ನ ಇಡೀ ರಾಜ್ಯಕ್ಕೆ ಮಾದರಿಯಾಗಿ ನೀಡಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದರೊಂದಿಗೆ ಸುತ್ತೂರು ಶ್ರೀ, ಸಾಲುಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‌ಕುಮಾರ್​ರವರಿಗೂ ಗೌರವ ಡಾಕ್ಟರೇಟ್ ನೀಡುವಂತೆ ಇತರ ಸಿಂಡಿಕೇಟ್ ಸದಸ್ಯರು ಶಿಫಾರಸ್ಸು ಮಾಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.