2008ರ ಗುಜರಾತ್ ಬಾಂಬ್ ಬ್ಲಾಸ್ಟ್ ಮಾಸ್ಟರ್ ಮೈಂಡ್ ಅರೆಸ್ಟ್

BREAKING NEWS, Crime, Kannada News, National, Top News No Comments on 2008ರ ಗುಜರಾತ್ ಬಾಂಬ್ ಬ್ಲಾಸ್ಟ್ ಮಾಸ್ಟರ್ ಮೈಂಡ್ ಅರೆಸ್ಟ್ 16

ನವದೆಹಲಿ: 2008 ರ ಗುಜರಾತ್ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಸುಭಾನ್ ಖುರೇಷಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ವಿಶೇಷ ತನಿಖಾ ದಳದ ಪೊಲೀಸರು ಉಗ್ರನನ್ನು ಬಂಧಿಸಿ ಕೋರ್ಟ್‍ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.

ಭಾರತದ ಮೋಸ್ಟ್ ವಾಂಟೆಂಡ್ ಉಗ್ರರ ಪಟ್ಟಿಯಲ್ಲಿದ್ದ ಖುರೇಷಿ ಕಳೆದ ಕೆಲ ವರ್ಷಗಳಿಂದ ಭೂಗತಗೊಂಡಿದ್ದ. ಭಾರತದಲ್ಲಿ ಮತ್ತೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯನ್ನು ಬಲ ಪಡಿಸಲು ಭಾರತಕ್ಕೆ ವಾಪಸ್ ಆಗಿದ್ದ. ಇಷ್ಟು ದಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಪಾಳದಲ್ಲಿ ನೆಲೆಸಿದ್ದ ಎಂದು ಡಿಸಿಪಿ ಪ್ರಮೋದ್ ಕುಶ್ವಾಹ ಸೋಮವಾರ ತಿಳಿಸಿದ್ದಾರೆ.

2008ರಲ್ಲಿ ಅಹಮದಾಬಾದ್ ನಲ್ಲಿ ನಡೆದ 21 ಬಾಂಬ್ ಸ್ಫೋಟದ ಘಟನೆಯಲ್ಲಿ ಈತನ ಹೆಸರು ಮೊದಲ ಬಾರಿ ಕೇಳಿ ಬಂದಿತ್ತು. ನಂತರ ಇಂಡಿಯಾನ್ ಮುಜಾಹಿದ್ದೀನ್ `ಅಲ್-ಅರಬಿ’ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಅನುಮಾನದ ಮೇಲೆ ಖುರೇಷಿ ಹೆಸರನ್ನು ಉಗ್ರರ ಪಟ್ಟಿಯಲ್ಲಿ ಘೋಷಣೆ ಮಾಡಿಲಾಗಿತ್ತು.

ಕೇವಲ ಗುಜರಾತ್ ಮಾತ್ರವಲ್ಲದೇ ದೆಹಲಿ, ಬೆಂಗಳೂರು ಹಾಗೂ 2006 ರ ಮುಂಬೈ ಸ್ಥಳೀಯ ರೈಲು ಸ್ಫೋಟಕ್ಕೆ ಸಂಬಂಧಿಸಿದಂತೆ ಉಗ್ರ ಖುರೇಷಿ ಯನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಹುಡುಕಾಟ ನಡೆಸುತ್ತಿತ್ತು. ಈ ಸಂಬಂಧ ಅಹಮದಾಬಾದ್ ಪೊಲೀಸರು ದೆಹಲಿಯ ವಿಶೇಷ ತನಿಖಾ ದಳದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರು.

2008 ರ ಜುಲೈ 26 ರಂದು ಅಹಮದಾಬಾದ್ ನಲ್ಲಿ 21 ಬಾಂಬ್ ಸ್ಫೋಟಗೊಂಡಿತ್ತು. ಈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 56 ಮಂದಿ ಮೃತಪಟ್ಟು 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Related Articles

Leave a comment

Back to Top

© 2015 - 2017. All Rights Reserved.