ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ನಿರ್ವಾಹಕ ಸಾವು 

Crime, Kannada News, Regional No Comments on ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ನಿರ್ವಾಹಕ ಸಾವು  23

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾದ ಪರಿಣಾಮ ನಿರ್ವಾಹಕ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳದ ಮೂಲದ ಸಿಜು. ಪಿ.ಪಿ ಎಂಬುವವನೆ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಕೇರಳದಿಂದ ಮೈಸೂರಿಗೆ ತೆರಳುತ್ತಿದ್ದ‌ ಬಸ್ ಕಗ್ಗಳದಹುಂಡಿ ಸಮೀಪದ ಸೇತುವೆಗೆ ಡಿಕ್ಕಿ ಹೊಡೆದು ಆಯತಪ್ಪಿದ್ದರಿಂದ ನಿರ್ವಾಹಕ ಸ್ಥಳದಲ್ಲೆ ಸಾವನ್ನಪ್ಪಿದರೆ.

ಬಸ್ ಅಲ್ಲಿದ್ದ 10 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.ಕೆಲವರಿಗೆ  ಪ್ರಾಥಮಿಕ ಚಿಕಿತ್ಸೆ ಕೊಡಿಸಿದರೆ ಇನ್ನ ಕೆಲವರನ್ನ ಮೈಸೂರು ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಗುಂಡ್ಲುಪೇಟೆ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

Related Articles

Leave a comment

Back to Top

© 2015 - 2017. All Rights Reserved.