ಡಾ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ಸ್ಥಾಪನೆಗೆ ಉಚ್ಛನ್ಯಾಯಾಲಯ ತಡೆಯಾಜ್ಞೆ

BREAKING NEWS, Kannada News, Regional, Top News No Comments on ಡಾ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ಸ್ಥಾಪನೆಗೆ ಉಚ್ಛನ್ಯಾಯಾಲಯ ತಡೆಯಾಜ್ಞೆ 32

ಮೈಸೂರು: ನಗರದ ಗನ್’ಹೌಸ್ ಮುಂಭಾಗ ನಿರ್ಮಾಣವಾಗುತ್ತಿರುವ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ಸ್ಥಾಪನೆಗೆ ಉಚ್ಛನ್ಯಾಯಾಲಯವು ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಅಖಿಲ ಭಾರತ ಕ್ಷತ್ರಿಯ ಮಹಾಸಭಾ, ಕರ್ನಾಟಕ ರಾಜ್ಯ ಅರಸು ಸಂಘವು ಪುತ್ಥಳಿ ನಿರ್ಮಾಣ ವಿರೋಧಿಸಿ 2017ರ ನವೆಂಬರ್ ನಾಲ್ಕರಂದು ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಜಿ.ರಮೇಶ್, ಪಿ.ಎಸ್.ದಿನೇಶ್ ಕುಮಾರ್ ಅವರ ದ್ವಿಸದಸ್ಯಪೀಠವು ತಡೆಯಾಜ್ಞೆ ಆದೇಶ ನೀಡಿದೆ.

ಸುತ್ತೂರು ಮಠದ 23ನೇ ಶ್ರೀಗಳಾದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ರ ಆ.29ರಂದು ಶಿಲಾನ್ಯಾಸ ನೆರವೇರಿಸಿದ್ದರು. ಸುಮಾರು 3 ಕೋಟಿ ರೂ.ವೆಚ್ಚದಲ್ಲಿ 11ಅಡಿ ಎತ್ತರದ ಪುತ್ಥಳಿ ನಿರ್ಮಾಣ ಕಾರ್ಯವೂ ಆರಂಭವಾಗಿತ್ತು.

Related Articles

Leave a comment

Back to Top

© 2015 - 2017. All Rights Reserved.